ಹಸುವಿನ ಬಾಲ, ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! - Mahanayaka
1:44 AM Thursday 12 - December 2024

ಹಸುವಿನ ಬಾಲ, ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು!

15/03/2021

ಗದಗ: ಮೂರು ದಿನಗಳ ಹಿಂದೆ ಕರುವಿಗೆ ಜನ್ಮ ನೀಡಿದ್ದ ಹಸುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದ್ದು, ಹಸುವಿನ ಬಾಲ ಹಾಗೂ ಕೆಚ್ಚಲನ್ನು ಕೊಯ್ದು ವಿಕೃತಿ ಮೆರೆದಿದ್ದಾರೆ.

ಇಲ್ಲಿನ ರಾಧಾಕೃಷ್ಣ ನಗರದಲ್ಲಿ ಈ ಘಟನೆ ಸಂಭವಿಸಿದ್ದು,  ಭಾನುವಾರ ರಾತ್ರಿ ಹಸುವಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ತೀವ್ರವಾಗಿ  ಗಾಯಗೊಂಡಿರುವ ಹಸು ಇದೀಗ ತನ್ನ ಕರುವಿಗೆ ಹಾಲುಣಿಸಲು ಕೂಡ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.

ಬಾಯಿಬಾರದ ಪ್ರಾಣಿಗಳ ಮೇಲೆ ಇಂತಹ ಹಲ್ಲೆ ನಡೆಸುವುದು ಖಂಡನೀಯವಾಗಿದೆ. ಇದೊಂದು ಅಮಾನವೀಯ ಕೃತ್ಯವಾಗಿದ್ದು, ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಕ್ರೋಶ ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ