ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ: ಈಗ ಹೇಗಿದೆ ಆರೋಗ್ಯ ಸ್ಥಿತಿ?
ಬೆಂಗಳೂರು: ಕನ್ನಡ ನಾಡಿನ ಪ್ರಸಿದ್ಧ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯವಾಗಿದ್ದು, ಆತಂಕ ಪಡುವ ಅವಶ್ಯಕತೆಯಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿರುವುದಾಗಿ ಅವರ ಆಪ್ತ ವಲಯ ತಿಳಿಸಿದೆ.
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಮಳೆಯಲ್ಲಿ ನೆನೆದಿದ್ದರಿಂದ ಹೆಚ್ಚು ಸುಸ್ತು ಕಂಡುಬಂದಿತ್ತು. ಅವರಿಗೆ ಸುಸ್ತಾಗುತ್ತಿದ್ದಂತೆಯೇ ಕೂಡಲೇ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಅವರಿಗೆ ನಿನ್ನೆಯೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಿದ್ದಾರೆ. ಸದ್ಯ ಮನೆಯಲ್ಲಿ ಶಿವಣ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ತಪಾಸಣೆ ನಂತರ ಆತಂಕ ಪಡುವಂಥಹದ್ದೇನಿಲ್ಲ ಎನ್ನಲಾಗಿದೆ.
ಈ ಹಿಂದೆ ಶಿವಣ್ಣಗೆ ಹೃದಯ ಸಂಬಂಧಿ ಸಮಸ್ಯೆ ಎದುರಾಗಿತ್ತು. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಿಗೆ ಆತಂಕ ಮೂಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hv1TpXr73MfF0Cet1rPZjq
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw