ಎಸ್‌ಎಸ್‌ಎಲ್‌ಸಿ ಪಾಸ್ ಆಗಿದ್ದೀರಾ..? ಕೇಂದ್ರ ಸರ್ಕಾರಿ ಹುದ್ದೆಗೆ ಸೇರಲು ಬಯಸುವವರಿಗೆ ಇಲ್ಲಿದೆ ಸಿಹಿಸುದ್ದಿ..!
ಎಸ್‌ಎಸ್‌ಎಲ್‌ಸಿ ಪಾಸಾಗಿದ್ದು ಕೇಂದ್ರ ಸರ್ಕಾರಿ ಹುದ್ದೆಗೆ ಸೇರಲು ಬಯಸುವವರಿಗೆ ಸಿಹಿ ಸುದ್ದಿಯೊಂದಿದೆ. 39,481 ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸಿಬ್ಬಂದಿ ನೇಮಕಾತಿ ಆಯೋಗ ಪರೀಕ್ಷಾ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಕಾನ್ಸ್‌ಟೇಬಲ್ (ಜೆನೆರಲ್ ಡ್ಯೂಟಿ) ಹುದ್ದೆಗಳನ್ನು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳು (CAPFs), ಎಸ್‌ಎಸ್‌ಎಫ್, ರೈಫಲ್‌ಮ್ಯಾನ್ (ಜಿಡಿ) ಇನ್ ಅಸ್ಸಾಂ ರೈಫಲ್ಸ್ ನಲ್ಲಿ ಹಾಗೂ ಇದೇ ಪರೀಕ್ಷೆ ಮೂಲಕ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯುರೊದ ಸಿಪಾಯಿ ಹುದ್ದೆಗಳಿಗೂ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ.
ಜಸ್ಟ್ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ವೇತನ ಶ್ರೇಣಿ ರೂ.21,700- 69,100 ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇಂದ್ರ / ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಉತ್ತೀರ್ಣರಾಗಿರಬೇಕು.
ಕಂಪ್ಯೂಟರ್ ಆಧಾರಿತ ಪರೀಕ್ಷೆ ಸಿಬಿಟಿ೦, ಪಿಎಸ್‌ಟಿ, ಪಿಇಟಿ, ದಾಖಲೆಗಳ ಪರಿಶೀಲನೆ, ಮೆಡಿಕಲ್ ಟೆಸ್ಟ್ ಆಯ್ಕೆ ಪ್ರಕ್ರಿಯೆಯಲ್ಲಿ ಇರುತ್ತವೆ. ಲಿಖಿತ ಪರೀಕ್ಷೆ ಹಿಂದಿ, ಇಂಗ್ಲಿಷ್, ಕನ್ನಡ ಸೇರಿದಂತೆ ಒಟ್ಟು 15 ಭಾಷೆಗಳಲ್ಲಿ ಇರುತ್ತದೆ.
ವೆಬ್‌ಸೈಟ್ ವಿಳಾಸ https://ssc.gov.in/ ಇಲ್ಲಿಂದ ಹೆಚ್ಚಿನ ಮಾಹಿತಿ ಪಡೆಯಬಹುದು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth