ಡಬಲ್ ಇಂಜಿನ್ ಸರ್ಕಾರದ ವಿರುದ್ಧ ಹಾವೇರಿ ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಪರೋಕ್ಷ ವಾಗ್ದಾಳಿ!
ಹಾವೇರಿ: ಕನ್ನಡ ಭಾಷೆ ರಕ್ಷಣೆಗೆ ಡಬಲ್ ಇಂಜಿನ್ ಸರ್ಕಾರದ ಕೊಡುಗೆ ಹಾಗೂ ಹಿಂದಿ ಹೇರಿಕೆಯ ಬಗ್ಗೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ದೊಡ್ಡರಂಗೇಗೌಡ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆಯ ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ್ದ ಅವರು, ಕನ್ನಡ ಭಾಷೆಯು ಇತ್ತೀಚೆಗೆ ಶಾಸ್ತ್ರೀಯ ಭಾಷೆಯ ಮಾನ್ಯತೆಯನ್ನು ಪಡೆದಿದ್ದರೂ ರಾಜ್ಯ ಸರ್ಕಾರ ಕೇಂದ್ರದ ಅನುದಾನ ಪಡೆಯುವಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಡಬಲ್ ಇಂಜಿನ್ ಸರ್ಕಾರ ತನ್ನ ಅನುಕೂಲತೆಗಳ ಬಗ್ಗೆ ಮಾತನಾಡುತ್ತದೆ. ಆದರೆ ಅದು ಕನ್ನಡಕ್ಕೆ ಹೇಗೆ ಒಲವು ತೋರಿದೆ , ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ಕೇವಲ ಕಣ್ಣೊರೆಸುವ ತಂತ್ರವಾಗಿದ್ದು, ಭಾಷೆಯ ಅಭಿವೃದ್ಧಿ ಮತ್ತು ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನದನ್ನು ಇದುವರೆಗೆ ಸಾಧಿಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
2017ರಿಂದ 2020ರ ಅವಧಿಯಲ್ಲಿ ಸಂಸ್ಕೃತ ಭಾಷೆಯ ಅಭಿವೃದ್ಧಿಗೆ 642 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದರೆ, ಕನ್ನಡಕ್ಕೆ 42 ಕೋಟಿ ರೂಪಾಯಿಗಳ ಬೇಡಿಕೆಗೆ ಕೇವಲ 3 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ನೀಡಿದೆ. ಇದೇ ಅವಧಿಯಲ್ಲಿ ತಮಿಳು ಭಾಷೆಗೆ 23 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಕಳೆದ ಐದು ವರ್ಷಗಳಲ್ಲಿ ಕನ್ನಡ ಭಾಷೆಗೆ ಸುಮಾರು 5 ಕೋಟಿ ರೂಪಾಯಿ ಬಂದಿದೆ. ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಗಮನಕ್ಕೆ ಇದನ್ನು ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕನ್ನಡವನ್ನು ಜೀವನೋಪಾಯ, ಉದ್ಯೋಗ ಮತ್ತು ಉದ್ಯಮಶೀಲತೆಯ ಭಾಷೆಯಾಗಿ ಉತ್ತೇಜಿಸಬೇಕು. ಗ್ರಾಮೀಣ ಭಾಗದ ಜನರು ತಮ್ಮ ಮಾತೃಭಾಷೆಯಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಲು ಸಿಬ್ಬಂದಿಗಳು ಸಹಾಯ ಮಾಡಲು ನಿರಾಕರಿಸುತ್ತಿದ್ದಾರೆ. ಹೀಗಿರುವಾಗ ಕರ್ನಾಟಕದಲ್ಲಿ ಇಂತಹ ಬ್ಯಾಂಕ್ ಗಳು ಏಕೆ ಇರಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw