ಮಠದ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಹಾವು ಕಡಿದು ಸ್ವಾಮೀಜಿ ಸಾವು!
ಗುಂಡ್ಲುಪೇಟೆ: ಮಠದ ಜಮೀನಿನಲ್ಲಿ ಕಳೆ ಕೀಳುತ್ತಿದ್ದ ವೇಳೆ ಹಾವು ಕಡಿದು ಸ್ವಾಮೀಜಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಹಾವು ಕಡಿದ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದ ಕಬ್ಬಿಣ ಕೋಲೇಶ್ವರ ಮಠದ ಕಿರಿಯ ಮಠಾಧೀಶ 42 ವರ್ಷ ವಯಸ್ಸಿನ ಇಮ್ಮಡಿ ಗುರುಮಲ್ಲಸ್ವಾಮೀಜಿ ಮೃತಪಟ್ಟವರಾಗಿದ್ದು, ಸ್ವಾಮೀಜಿಗಳು ಮಠದ ಜಮೀನಿನಲ್ಲಿ ಕೃಷಿ ಕಾರ್ಮಿಕರೊಂದಿಗೆ ಕಳೆ ಕೀಳುತ್ತಿದ್ದಾಗ ಹಾವು ಶ್ರೀಗಳ ಪಾದಕ್ಕೆ ಕಚ್ಚಿದೆ ಎನ್ನಲಾಗಿದೆ.
ಹಾವು ಕಚ್ಚಿರುವುದು ತಿಳಿಯುತ್ತಿದ್ದಂತೆಯೇ ಅವರನ್ನು ತಕ್ಷಣವೇ ಗುಂಡ್ಲುಪೇಟೆ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಶ್ರೀಗಳ ಅಂತ್ಯಕ್ರಿಯೆಯು ಗೋಪಾಲಪುರ ಮಠದ ಬಳಿ ಭಾನುವಾರ ನಡೆಯಲಿದೆ. ಸ್ವಾಮೀಜಿಗಳ ನಿಧನಕ್ಕೆ ಶಾಸಕ ಸಿ.ಎಸ್.ನಿರಂಜನಕುಮಾರ್, ಕಾಂಗ್ರೆಸ್ ಮುಖಂಡ ಹೆಚ್.ಎಂ.ಗಣೇಶಪ್ರಸಾದ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಹೆಚ್.ಎಸ್.ನಂಜಪ್ಪ ಸೇರಿದಂತೆ ಇನ್ನಿತರ ಸಂತಾಪ ಸೂಚಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
“ಮಠಕ್ಕೆ ಬಂದು ತತ್ತಿ ತಂತೀವಿ” | ಮೊಟ್ಟೆ ವಿರೋಧಿ ಮಠಾಧೀಶರ ಬೆಂಡೆತ್ತಿದ ಮಕ್ಕಳು
ಬಿಟ್ ಕಾಯಿನ್ ಹಗರಣದ ಸೂತ್ರಧಾರ ‘ಶ್ರೀಕೃಷ್ಣ’ ಕರ್ನಾಟಕದಿಂದ ಪರಾರಿ?
ನಾಡೋಜ ಕವಿ ದಿ.ಸಿದ್ಧಲಿಂಗಯ್ಯ ಅವರ ಸಹಧರ್ಮಿಣಿ ರಮಾದೇವಿಯವರು ಇಂದು ಕಾಸರಗೋಡಿಗೆ
ಅಂತರ್ ಧರ್ಮೀಯ ವಿದ್ಯಾರ್ಥಿ, ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಹಲ್ಲೆ: ನಾಲ್ವರು ಆರೋಪಿಗಳ ಬಂಧನ
ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?
ಮಕ್ಕಳು ಅಪೌಷ್ಠಿಕತೆಯಿಂದ ತುಂಬಾ ಒದ್ದಾಡುತ್ತಿದ್ದಾರೆ | ಮೊಟ್ಟೆ ವಿರೋಧಕ್ಕೆ ಶಿಕ್ಷಣ ಸಚಿವರು ಹೇಳಿದ್ದೇನು?