ಸಂಸತ್ ಭವನದ ಉದ್ಘಾಟನಾ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ: ಹೆಚ್.ಡಿ.ದೇವೇಗೌಡ
ಬೆಂಗಳೂರು: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂದು 91 ವರ್ಷ ವಯಸ್ಸಿನ ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ.
ಭಾರತದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿ ಮಹತ್ತರವಾದ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ. 1962ರಲ್ಲಿ ಕರ್ನಾಟಕ ವಿಧಾನಸಭೆಗೆ ಪ್ರವೇಶಿಸಿ 1991ರಿಂದ ಸಂಸತ್ ಸದಸ್ಯನಾಗಿದ್ದೆ. 32 ವರ್ಷಗಳ ಹಿಂದೆ ಈ ಮಹಾಮನೆಯನ್ನು ಪ್ರವೇಶಿಸಿದಾಗ ನನಗೆ ನಾನು ಪ್ರಧಾನಿಯಾಗುತ್ತೇನೆ ಎಂದು ಎಂದಿಗೂ ಭಾವಿಸಿರಲಿಲ್ಲ ಮತ್ತು ಸಾರ್ವಜನಿಕ ಜೀವನದಲ್ಲಿ ಇಷ್ಟು ದಿನ ಇರುತ್ತೇನೆ ಎಂದು ನಾನು ನಿರೀಕ್ಷಿಸಿರಲಿಲ್ಲ ಎಂದು ಗೌಡರು ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw