ಮಂಡ್ಯದಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿದ ಹೆಚ್.ಡಿ.ಕುಮಾರಸ್ವಾಮಿ
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸುವ ಮೂಲಕ ಬಹುತೇಕ ಪ್ರಚಂಡ ಗೆಲುವನ್ನು ಖಚಿತಪಡಿಸಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರು 1 ಲಕ್ಷದ 45 ಸಾವಿರ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 8ನೇ ಸುತ್ತಿನ ಮತಎಣಿಕೆ ಮುಕ್ತಾಯದ ಹೊತ್ತಿಗೆ ಎಚ್ ಡಿಕೆ 3,72,848 ಮತಗಳನ್ನು ಪಡೆದರೆ, ಪ್ರತಿಸ್ಪರ್ಧಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣಗೌಡ ಅಲಿಯಾಸ್ ಸ್ಟಾರ್ ಚಂದ್ರು ಅವರು 2,27,809 ಮತಗಳನ್ನು ಪಡೆದಿದ್ದಾರೆ. ಬರೋಬ್ಬರಿ 1 ಲಕ್ಷದ 45 ಸಾವಿರದ ಅಂತರದೊಂದಿಗೆ ಎಚ್ ಡಿಕೆ ಮಂಡ್ಯದ ಲೋಕಸಭೆ ಗೆಲುವಿನತ್ತ ಹೆಜ್ಜೆ ಹಾಕಿದ್ದಾರೆ.
ಗೆಲುವು ಖಚಿತವಾಗುತ್ತಿದ್ದಂತೆ ಮಾಜಿ ಸಿಎಂ ಎಚ್ಡಿಕೆ ಬೆಂಗಳೂರಿನಿಂದ ಮಂಡ್ಯದತ್ತ ಹೊರಟಿದ್ದಾರೆ. ಕಳೆದ 2019ರ ಲೋಕಸಭಾ ಚುನಾವಣೆಯಲ್ಲಿ ಕೇವಲ 1 ಸ್ಥಾನಕ್ಕೆ ಕುಸಿದಿದ್ದ ಜೆಡಿಎಸ್ ಈ ಬಾರಿ ಪುಟಿದೇಳುವ ಲಕ್ಷಣಗಳು ಕಾಣುತ್ತಿವೆ. ಬಿಜೆಪಿ ಜತೆ ಕೈಜೋಡಿಸಿ ಸ್ಪರ್ಧಿಸಿರುವ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಮುನ್ನಡೆ ಸಾಧಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: