ಸುದ್ದಿಗೋಷ್ಠಿ ವೇಳೆ ಹೆಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು - Mahanayaka
6:04 PM Wednesday 30 - October 2024

ಸುದ್ದಿಗೋಷ್ಠಿ ವೇಳೆ ಹೆಚ್.ಡಿ.ಕುಮಾರಸ್ವಾಮಿ ಮೂಗಿನಲ್ಲಿ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

hd kumara swamy
28/07/2024

ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ವೇಳೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತಸ್ರಾವವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದೆ.

ವಾಲ್ಮೀಕಿ, ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್​ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದೆ. ಈ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಮಾತನಾಡುತ್ತಿದ್ದರು.

ಮಾತನಾಡುತ್ತಿದ್ದ ವೇಳೆ ಏಕಾಏಕಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ. ಬೆಂಬಲಿಗರು ಸಮೀಪದಲ್ಲೇ ಇದ್ದರು. ರಕ್ತ ಸ್ರಾವವಾಗುತ್ತಿರುವುದನ್ನು ಕಂಡು ತಕ್ಷಣವೇ ಅವರಿಗೆ ಟವಲ್ ನೀಡಿದ್ದಾರೆ. ಕುಮಾರಸ್ವಾಮಿ ಅವರು ಟವಲ್ ನಿಂದ ಮೂಗು ಒರಸಿಕೊಂಡಿದ್ದಾರೆ.  ಮತ್ತೆ ಮಾತನಾಡಲು ಮುಂದಾಗಿದ್ದಾರೆ. ಆದರೆ ಈ ವೇಳೆ ಹೆಚ್ಚಿನ ಪ್ರಮಾಣದಲ್ಲಿ ರಕ್ತಸ್ರಾವವಾಗಿದೆ.

ತಕ್ಷಣವೇ ಪತ್ರಿಕಾಗೋಷ್ಠಿ ನಡೆಯುತ್ತಿದ್ದ ಖಾಸಗಿ ಹೊಟೇಲ್ ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ