HDFC ಬ್ಯಾಂಕ್ ನಿಂದ ವಿದ್ಯಾರ್ಥಿಗಳಿಗೆ 75 ಸಾವಿರ ರೂ.ವರೆಗೆ ವಿದ್ಯಾರ್ಥಿವೇತನ
HDFC Parivartan Scholarship 2024 — HDFC ಬ್ಯಾಂಕ್ ವತಿಯಿಂದ 1ನೇ ತರಗತಿಯಿಂದ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ 75,000 ರೂಪಾಯಿಯವರೆಗೆ ವಿದ್ಯಾರ್ಥಿ ವೇತನವನ್ನು ನೀಡುಲಾಗುತ್ತಿದೆ.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಏನೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು? ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನ ಲೇಖನದಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿವೇತನದ ವಿವರ :
ಹಿಂದುಳಿದ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಗಬಾರದು ಎಂಬ ಉದ್ದೇಶದಿಂದ HDFC ECSS — (Educational Crisis Scholarship Support) ಎಂಬ ಹೆಸರಿನಲ್ಲಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ. ಶೈಕ್ಷಣಿಕ ಕೋರ್ಸ್ ಗಳಿಗೆ ಅನುಗುಣವಾಗಿ ವಿದ್ಯಾರ್ಥಿವೇತನದ ಮೊತ್ತವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ — 35,000ರೂ.
* ವೃತ್ತಿಪರ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ — 75,000ರೂ.
* ಸಾಮಾನ್ಯ ಪದವಿ ವಿದ್ಯಾರ್ಥಿಗಳಿಗೆ — 30,000ರೂ.
* ವೃತ್ತಿಪರ ಪದವಿ ವಿದ್ಯಾರ್ಥಿಗಳಿಗೆ — 50,000ರೂ.
* 1 ರಿಂದ 6ನೇ ತರಗತಿಯ ವಿದ್ಯಾರ್ಥಿಗಳಿಗೆ — 15,000ರೂ.
* 7 ರಿಂದ 12ನೇ ತರಗತಿ, ಡಿಪ್ಲೋಮ, ಐಟಿಐ ಮತ್ತು ಪೋಲಿಟೆಕ್ನಿಕ್ ಓದುತ್ತಿರುವ ವಿದ್ಯಾರ್ಥಿಗಳಿಗೆ — 18,000ರೂ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು :
* ವಿದ್ಯಾರ್ಥಿಯ ಹಿಂದಿನ ತರಗತಿಯ ಅಂಕಪಟ್ಟಿ
* ಭಾವಚಿತ್ರ
* ಆದಾಯ ಪ್ರಮಾಣ ಪತ್ರ
* ಬ್ಯಾಂಕ್ ಪಾಸ್ ಬುಕ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ — 31 ಡಿಸೆಂಬರ್ 2024
ಅರ್ಜಿ ಸಲ್ಲಿಕೆಯ ಲಿಂಕ್: https://www.buddy4study.com/page/hdfc-bank-parivartans-ecss-programme
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: