ಕರ್ತವ್ಯದ ವೇಳೆ ಹೃದಯಾಘಾತದಿಂದ ನಿಧನರಾದ ಹೆಡ್ ಕಾನ್ ಸ್ಟೇಬಲ್
![hanumantha lamani](https://www.mahanayaka.in/wp-content/uploads/2022/12/hanumantha-lamani.jpg)
ಮಂಗಳೂರಿನ ಕಾವೂರು ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹನುಮಂತ ಲಮಾಣಿ(38) ಎಂಬುವವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದವರಾದ ಇವರು ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ವಿಶೇಷ ಕರ್ತವ್ಯದಡಿ ಊರಿಗೆ ತೆರಳಿದ್ದರು. ಅಲ್ಲಿಂದು ಮುಂಜಾನೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
2008ರ ಬ್ಯಾಚ್ ನಲ್ಲಿ ಸೇವೆಗೆ ಸೇರ್ಪಡೆಗೊಂಡಿದ್ದ ಅವರು, ಈ ಹಿಂದೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮುಲ್ಕಿ, ಉತ್ತರ ಸಂಚಾರ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ನಾಲ್ವರು ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka