ಬೈಕ್ – ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

18/02/2025
ಮೂಡಿಗೆರೆ: ಬೈಕ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಲ್ಗುಣಿ ಬಳಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಹಾಗೂ ಮೂಡಿಗೆರೆ ಕಡೆ ಹೋಗುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ.
ಬೈಕ್ ಸವಾರ ಸುಜೀತ್ ಎಂಬುವನು ಮೆಗಲ್ ಪೇಟೆಯವನಾಗಿದ್ದು ತಲೆ ಹಾಗೂ ಕೈ ಕಾಲಿಗೆ ತೀವ್ರ. ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ . ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು.ಪ್ರಕರಣ ದಾಖಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: