ಹೃದಯಾಘಾತ: ಲೇಖಕ, ಸಾಹಿತಿ ಶೇಖರ್ ಅಜೆಕಾರು ನಿಧನ
31/10/2023
ಕಾರ್ಕಳ: ಲೇಖಕ, ಸಾಹಿತಿ, ಪತ್ರಕರ್ತ ಶೇಖರ್ ಅಜೆಕಾರು (54) ಹೃದಯಾಘಾತದಿಂದ ನಿಧನರಾಗಿದ್ದಾರೆ.
ತಾಲೂಕಿನ ಅಜೆಕಾರು ಗ್ರಾಮದ ನಿವಾಸಿಯಾಗಿರುವ ಶೇಖರ್ ಅಜೆಕಾರ್ ಇವರು, ಮಕ್ಕಳ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳುವ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.