ವಾಲಿಬಾಲ್ ಆಡುತ್ತಿದ್ದ ವೇಳೆ ಹೃದಯಾಘಾತ: ಯುವಕ ಸಾವು
ಕಾರ್ಕಳ: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ 34 ವರ್ಷದ ಸಂತೋಷ ಮೃತ ದುರ್ದೈವಿ. ಇವರು ಕಳೆದ 4 ವರ್ಷಗಳ ಹಿಂದೆ ಹೃದಯಾಘಾತವಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ನಿನ್ನೆ ಸಂಜೆ ಫೆ.25 ಕಾರ್ಕಳ ತಾಲೂಕು ಕುಕ್ಕುಂದೂರು ಗ್ರಾಮದ ದುರ್ಗಾ ಅನುದಾನಿತ ಶಾಲೆಯ ಮೈದಾನದಲ್ಲಿ ವಾಲಿಬಾಲ್ ಆಡುತ್ತಿರುವಾಗ ಮೈದಾನದಲ್ಲಿ ನಿಂತಿದ್ದ ಸಂತೋಷರವರು ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅದಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw