ಭಾರೀ ಪ್ರಮಾಣದ ಗುಡ್ಡ ಕುಸಿತ: ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್
ಹಾಸನ: ಗುಡ್ಡ ಕುಸಿತದ ಪರಿಣಾಮ ಶಿರಾಡಿ ಘಾಟ್ ರಸ್ತೆ ಮತ್ತೆ ಬಂದ್ ಆಗಿದೆ. ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು-ಮಂಗಳೂರು ಶಿರಾಡಿಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ.
ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಭಾರೀ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತದ ಪರಿಣಾಮ ಹಲವು ವಾಹನಗಳು ಮಣ್ಣಿನಡಿ ಸಿಲುಕಿದೆ.
ಗುಡ್ಡ ಕುಸಿತದ ತೀವ್ರತೆಗೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಭಾರೀ ಗಾತ್ರದ ಕಂಟೈನರ್ ಪಲ್ಟಿಯಾಗಿದೆ. ಕಂಟೈನರ್ ಚಾಲಕ ಮಣ್ಣಿನಡಿಯಲ್ಲಿ ಸಿಲುಕಿರುವುದಾಗಿ ತಿಳಿದು ಬಂದಿದೆ.
ಇಂದು ಬೆಳಗ್ಗೆಯಷ್ಟೇ ಕಂದಾಯ ಸಚಿವ ಕೃಷ್ಣಭೈರೇಗೌಡ ಈ ಸ್ಥಳಕ್ಕೆ ಭೇಟಿ ನೀಡಿದ್ದರು. ಸಂಜೆ ವೇಳೆಗೆ ಈ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು, ಇದರ ಬೆನ್ನಲ್ಲೇ ಭಾರೀ ಪ್ರಮಾಣದಲ್ಲಿ ಗುಡ್ಡಕುಸಿತವಾಗಿದೆ.
ಈ ಗುಡ್ಡ ಕುಸಿತದಲ್ಲಿ ಎರಡು ಕಂಟೈನರ್, ಒಂದು ಟ್ಯಾಂಕರ್ ಹಾಗೂ ಮೂವರು ಚಾಲಕರು ಸಿಲುಕಿದ್ದರು. ಸದ್ಯ ಮೂವರು ಚಾಲಕರನ್ನು ಪೊಲೀಸರು ರಕ್ಷಿಸಿದ್ದಾರೆ. ಮಳೆ ಮುಂದುವರೆದಿದ್ದು ಮತ್ತೆ ಗುಡ್ಡ ಕುಸಿಯುವ ಸಾಧ್ಯತೆ ಕಂಡು ಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth