ಭಾರೀ ಮಳೆ ಮುನ್ಸೂಚನೆ: ಅ.23ರಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ
22/10/2024
ಬೆಂಗಳೂರು: ಸತತ ಮಳೆಯ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಾಳೆ(ಅಕ್ಟೋಬರ್ 23) ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಆದೇಶಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಜಗದೀಶ್ ಈ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡುವಂತೆ ಆದೇಶಿಸಿದ್ದು, ಶನಿವಾರ ಮಧ್ಯಾಹ್ನ ಅಥವಾ ಭಾನುವಾರ ಹೆಚ್ಚುವರಿ ತರಗತಿ ನಡೆಸಲು ಸೂಚಿಸಿದ್ದಾರೆ.
ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಇರಲ್ಲ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: