ಚಿಕ್ಕಮಗಳೂರು: ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆ

11/04/2024
ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆಗಳಲ್ಲಿ ಭಾರೀ ಮಳೆಯಾಗಿದ್ದು, ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.
ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ. ಆವುತಿ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದೆ. ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಗ್ರಾಮದಲ್ಲಿ ಸಾಧಾರಣ ಮಳೆ
ಕಳೆದ ಹಲವು ದಿನಗಳಿಂದ ಮಳೆಗಾಗಿ ಕಾಯುತ್ತಿದ್ದ ಜನರ ಮೊಗದಲ್ಲಿ ಸಂತಸ ಮೂಡಿದೆ.
ಕಾಫಿ ಬೆಳೆಗಾರರು ಹರ್ಷ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಈ ವರ್ಷದಲ್ಲಿ ಮೊದಲ ಬಾರಿಗೆ ಮಳೆಯಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth