ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಡದೇ ಸುರಿಯುತ್ತಿರುವ ಭಾರೀ ಮಳೆ
ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಇಂದು ಮಳೆ ಅಬ್ಬರ ಜೋರಾಗಿದೆ. ಮಂಗಳೂರು ನಗರ ಸೇರಿದಂತೆ ಬಂಟ್ವಾಳ, ಮೂಡಬಿದ್ರೆ, ಪುತ್ತೂರು, ಸುಳ್ಯ, ಬೆಳ್ತಂಗಡಿ, ಕಡಬ, ಸುಬ್ರಹ್ಮಣ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ.
ಕರಾವಳಿ ಭಾಗದಲ್ಲಿ ಇನ್ನೂ ಮೂರು ದಿನ ಮಳೆ ಧಾರಕಾರವಾಗಿ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದ್ದು, ಕೊನೆಯ ಎರಡು ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿನ್ನೆ ಒಂದೇ ಪ್ರದೇಶದಲ್ಲಿ ಅಬ್ಬರದ ಮಳೆಯಾಗಿತ್ತು. ರಾಜ್ಯದ ಟಾಪ್ 10 ಗರಿಷ್ಠ ಮಳೆ ದಾಖಲಾದ ಪ್ರದೇಶಗಳ ಪೈಕಿ ಜಿಲ್ಲೆಯ 11 ಪ್ರದೇಶಗಳು ಸೇರಿವೆ.
ಸುಳ್ಯ, ಸಂಪಾಜೆ ಹೊರತುಪಡಿಸಿದರೆ, ಬೇರೆ ತಾಲೂಕುಗಳಲ್ಲಿ ಹಗಲು ಹೊತ್ತು ಮಳೆ ಪ್ರಮಾಣ ಕಡಿಮೆ. ಸುಳ್ಯ ತಾಲೂಕಿನ ಸಂಪಾಜೆ, ಬಳ್ಪ, ದೇವಚಳ್ಳಿ, ಗುತ್ತಿಗಾರುಗಳಲ್ಲಿ ಅತ್ಯಧಿಕ ಮಳೆ ದಾಖಲಾಗಿದೆ.
ಕಡಬ ತಾಲೂಕಿನ ಶಿರಾಡಿ, ಕೊಂಬಾರು, ನೂಜಿಬಾಳ್ತಿಲ, ಬೆಳ್ತಂಗಡಿಯ ನಾರಾವಿ, ಸುಲ್ಕೇರಿಗಳಲ್ಲಿ ಭಾರಿ ಮಳೆಯಾಗಿದೆ. ಉಪ್ಪಿನಂಗಡಿ ನೇತ್ರಾವತಿ, ಕುಮಾರಧಾರ ನದಿ 25.20 ಮೀಟರ್ ಹಾಗೂ ಬಂಟ್ವಾಳ ನೇತ್ರಾವತಿ ನದಿ 5.2 ಮೀಟರ್ ಮತ್ತು ಗುಂಡ್ಯ ನದಿ 3.7 ಮೀಟರ್‌ನಲ್ಲಿ ಹರಿಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka