ಚಿಕ್ಕಮಗಳೂರು ಜಿಲ್ಲಾದ್ಯಂತ ಭರ್ಜರಿ ಮಳೆ: ರೈತರ ಮೊಗದಲ್ಲಿ ಮಂದಹಾಸ
19/08/2023
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಇಂದು ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.
ಮಲೆನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆಯಾಗಿದೆ. ಚಿಕ್ಕಮಗಳೂರು, ಬಾಳೆಹೊನ್ನೂರು, ಮೂಡಿಗೆರೆ, ಎನ್.ಆರ್.ಪುರದಲ್ಲಿ ಭರ್ಜರಿ ಮಳೆಯಾಗಿದೆ.
ಕಳೆದ 20 ದಿನಗಳವರೆಗೆ ಮಳೆರಾಯ ಬಿಡುವು ತೆಗೆದುಕೊಂಡಿದ್ದ, ಇದೀಗ ಮತ್ತೆ ಮಳೆ ಆರಂಭವಾಗಿದ್ದು, ಮಳೆ ಇಲ್ಲದೇ ಕಂಗಾಲಾಗಿದ್ದ ಜನರ ಮುಖದಲ್ಲಿ ಮಂದಹಾಸ ಮೂಡಿದೆ.
ಈ ಬಾರಿ ಮಳೆ ಕಡಿಮೆಯಾಗಿದ್ದರಿಂದಾಗಿ ಕಾಫಿ, ಅಡಿಕೆ ಬೆಳೆಗಾರರು ಹಾಗೂ ರೈತರು ಆತಂಕಗೊಂಡಿದ್ದರು. ಇದೀಗ ಮತ್ತೆ ಮಳೆ ಆರಂಭವಾಗಿದ್ದರಿಂದ ನಿಟ್ಟುಸಿರು ಬಿಡುವಂತಾಗಿದೆ.