ಕರಾವಳಿಯಲ್ಲಿ ಭಾರೀ ಗಾಳಿ ಮಳೆ: ಎರಡು ಜೀವ ಬಲಿ
ಕಾಪು: ಭಾರೀ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ಮಜೂರು ಮಸೀದಿ ಬಳಿ ಇಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಶಿರ್ವ ಶಾಂತಿಗುಡ್ಡೆಯ ಪುಷ್ಪಾ(45) ಹಾಗೂ ಅವರ ಮೈದುನ ಎಂದು ಗುರುತಿಸಲಾಗಿದೆ. ಕಾಪು ಕಡೆಯಿಂದ ಶಿರ್ವ ಕಡೆಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಶರೀಫ್ ಎಂಬವರ ರಿಕ್ಷಾ ಮತ್ತು ಶಿರ್ವ ಕಡೆಯಿಂದ ಕಾಪು ಕಡೆಗೆ ಬರುತ್ತಿದ್ದ ದಿನೇಶ್ ಎಂಬವರ ರಿಕ್ಷಾದ ಮೇಲೆ ಮರ ಬಿತ್ತೆನ್ನಲಾಗಿದೆ.
ಇದರಿಂದ ಎರಡೂ ರಿಕ್ಷಾಗಳು ಸಂಪೂರ್ಣ ಜಖಂಗೊಂಡಿದ್ದು, ಈ ಎರಡು ರಿಕ್ಷಾಗಳ ಚಾಲಕರು ಅಪಾಯದಿಂದ ಪಾರಾದರು. ಶರೀಫ್‌ನ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ರಿಕ್ಷಾದೊಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು.
ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ರಿಕ್ಷಾದ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿ ಮೃತದೇಹವನ್ನು ಹೊರಗೆ ತೆಗೆಯಲಾಯಿತು. ಸ್ಥಳದಲ್ಲಿ ಕಾಪು ಪೊಲೀಸರು ಹಾಜರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw