ಮುಳುಗುವ ಹಂತದಲ್ಲಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ

ಚಿಕ್ಕಮಗಳೂರು: ಕಾಫಿನಾಡ ಪಶ್ಚಿಮ ಘಟ್ಟಗಳ ಸಾಲಲ್ಲಿ ಭಾರೀ ಮಳೆಯಾಗುತ್ತಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ರಾತ್ರಿಯಿಡಿ ಧಾರಾಕಾರ ಮಳೆಯಾಗಿದೆ.
ಮಳೆ ಅಬ್ಬರಕ್ಕೆ ಭದ್ರಾ ನದಿ ಹರಿವಿನ ಮಟ್ಟದಲ್ಲಿ ಭಾರೀ ಏರಿಕೆಯಾಗಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತದಲ್ಲಿದ್ದು, ಕ್ಷಣ ಗಣನೆ ಆರಂಭವಾಗಿದೆ.
ಹೆಬ್ಬಾಳೆ ಸೇತುವೆಗೆ ಭದ್ರಾ ನೀರು ಅಪ್ಪಳಿಸುತ್ತಿದೆ. ಅರ್ಧ–ಒಂದು ಅಡಿ ನೀರು ಬಂದ್ರು ಸೇತುವೆ ಜಲಾವೃತವಾಗುವ ಸಾಧ್ಯತೆ ಕಂಡು ಬಂದಿದೆ. ಹೆಬ್ಬಾಳೆ ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ.
ಕಳಸ–ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ.ಈ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಪ್ರವಾಸಿಗರಿಗರು ಹಾಗೂ ಸ್ಥಳೀಯರನ್ನು ಪೊಲೀಸರು ತಡೆ ಹಿಡಿದಿದ್ದಾರೆ.
ಇನ್ನೂ ಪರಿಸ್ಥಿತಿ ಅರಿಯದೇ ಪ್ರವಾಸಿಗರು ಪೊಲೀಸರ ಜೊತೆಗೆ ಕಿರಿಕ್ ಮಾಡುತ್ತಿರುವ ಘಟನೆಯೂ ನಡೆಯಿತು. ಯಾವುದೇ ಕ್ಷಣದಲ್ಲಿ ಸೇತುವೆ ಮೇಲೆ ಭದ್ರಾ ನದಿ ನೀರು ಉಕ್ಕುವ ಸಾಧ್ಯತೆ ಕಂಡು ಬಂದಿದೆ. ಸ್ಥಳದಲ್ಲಿ ಕಳಸ ಪೊಲೀಸರು ಮೊಕಂ ಹೂಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: