ಮುಸ್ಲಿಮರು, ಹಿಂದುಳಿದ ಜಾತಿಗಳಿಗೂ ಹೆಚ್ಚುವರಿ ಮೀಸಲಾತಿ ನೀಡಲು ಒತ್ತಾಯ

press meet
14/10/2022

ಮಂಗಳೂರು: ರಾಜ್ಯದಲ್ಲಿ ಮುಸ್ಲಿಮರು ಹಾಗೂ ಹಿಂದುಳಿದ ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣ ರಂಗದಲ್ಲಿ ಈಗ ಇರುವ ಶೇಕಡಾವಾರು ಮೀಸಲಾತಿ ಜೊತೆಗೆ ಹೆಚ್ಚುವರಿಯಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಿ ಪ್ರಾತಿನಿಧ್ಯ ನೀತಿಯನ್ನು ಜಾರಿಗೊಳಿಸಬೇಕು ಎಂದು ಅಲ್ಪಸಂಖ್ಯಾತರು, ಹಿಂದುಳಿಸಲ್ಪಟ್ಟ ಜಾತಿಗಳು ಹಾಗೂ ದಲಿತರ ಜನ ಚಳವಳಿ ಅಹಿಂದದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಒತ್ತಾಯಿಸಿದೆ.

ಮಂಗಳೂರು ಪ್ರೆಸ್ ಕ್ಲಬ್‌ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಹಿಂದ ದ.ಕ. ಜಿಲ್ಲಾಧ್ಯಕ್ಷ ವಾಸುದೇವ ಬೋಳೂರು,  ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರತ್ಯೇಕವಾಗಿರುವ ಶೇ.4 ಮೀಸಲಾತಿಯನ್ನು ರದ್ದುಗೊಳಿಸಿ ಅವರನ್ನು 101 ಹಿಂದುಳಿದ ಜಾತಿಗಳ ‘2ಎ’ ಗುಂಪಿಗೆ ಸೇರಿಸಲು ರಾಜ್ಯ ಸರ್ಕಾರದ ನೂತನ ಮೀಸಲಾತಿ ನೀತಿಯಲ್ಲಿ ಉದ್ದೇಶಿಸಲಾಗಿದೆ. ಇದು ಸರಕಾರದ ದ್ವಂದ್ವ ನೀತಿ ಎಂದರು.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ

Exit mobile version