ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ: ನಾಲ್ವರಿಗೆ ಗಾಯ
23/09/2022
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕೂಟೇಲು ಸೇತುವೆಯ ಸಮೀಪ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಮಗುಚಿ ಬಿದ್ದ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಹೆದ್ದಾರಿ ಅಗಲೀಕರಣದ ಕಾಮಗಾರಿಗೆ ನಿಯುಕ್ತಿಗೊಂಡ ಸಂಸ್ಥೆಗೆ ಸೇರಿದ ಲಾರಿ ಇದಾಗಿದ್ದು, ಲಾರಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಮಧ್ಯೆ ಮಗುಚಿ ಬಿತ್ತು.
ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದ ಲಾರಿ
ಅಪಘಾತದ ಪರಿಣಾಮ ಲಾರಿ ಚಾಲಕ ಮಧ್ಯಪ್ರದೇಶದ ನಿವಾಸಿಗಳಾದ ನಾರಾಯಣ್, ಕ್ಲೀನರ್ ಪುಷ್ಪೇಂದ್ರ ಮತ್ತಿಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka