ಹಿಜಾಬ್ ಧರಿಸಿದ್ದ ಮಹಿಳೆಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್
ದುಬೈ :ಬಹ್ರೇನ್ ನಲ್ಲಿರುವ ಭಾರತೀಯ ರೆಸ್ಟೋರೆಂಟ್ ಒಂದರಲ್ಲಿ ಹಿಜಾಬ್ ಧರಿಸಿದ ಮಹಿಳೆಗೆ ಪ್ರವೇಶ ನೀಡಲು ನಿರಾಕರಿಸಿದ ಘಟನೆ ನಡೆದಿದೆ .
ದುಬೈನ ಅದ್ ಲಿಯಾ ಎಂಬಲ್ಲಿ ಈ ಘಟನೆ ನಡೆದಿದ್ದು ರೆಸ್ಟೋರೆಂಟ್ ನಲ್ಲಿ ನಡೆದ ಘಟನೆಯ ವಿಡಿಯೋ ತುಣುಕನ್ನು ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಆಗುತ್ತಿದ್ದಂತೆ ಬಹ್ರೇನ್ ಪ್ರವಾಸೋದ್ಯಮ ಪ್ರಾಧಿಕಾರವು ಘಟನೆಯ ಕುರಿತು ತನಿಖೆಯನ್ನು ಪ್ರಾರಂಭಿಸಿ ರೆಸ್ಟೋರೆಂಟ್ ನ್ನು ತಾತ್ಕಾಲಿಕವಾಗಿ ಮುಚ್ಚಿಸಲಾಗಿದೆ.
ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮತ್ತು ದೇಶದ ಕಾನೂನುಗಳಿಗೆ ವಿರುದ್ಧವಾದ ಯಾವುದೇ ನಿರ್ಬಂಧಗಳನ್ನು ವಿಧಿಸದಂತೆ ಪ್ರವಾಸೋದ್ಯಮ ಪ್ರಾಧಿಕಾರವು ನಿರ್ದೇಶಿಸಿದೆ. ಘಟನೆಗೆ ಸಂಬಂಧಿಸಿದಂತೆ ರೆಸ್ಟೋರೆಂಟ್ ವ್ಯವಸ್ಥಾಪಕನನ್ನು ಅಮಾನತುಗೊಳಿಸಲಾಗಿದೆ ಎಂದು ರೆಸ್ಟೋರೆಂಟ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಸ್ಫೋಟಗೊಂಡ ರಷ್ಯಾದ ನೌಕೆ :ಉಪಗ್ರಹ ಚಿತ್ರ ಬಿಡುಗಡೆ
ಪ್ರಪಾತಕ್ಕೆ ಉರುಳಿದ ಬಸ್: 7 ಮಂದಿ ಸಾವು, 45 ಮಂದಿಗೆ ಗಾಯ
ಕಾಡಾನೆ ದಾಳಿ: ಮಹಿಳೆ ಸಾವು; ಓರ್ವ ಗಂಭೀರ
ಬಿರ್ಭೂಮ್ ಹಿಂಸಾಚಾರ: ಘಟನಾ ಸ್ಥಳದಲ್ಲಿ ಮತ್ತೆ 40 ಕಚ್ಚಾ ಬಾಂಬ್ ಗಳು ಪತ್ತೆ
ಸಿದ್ದರಾಮಯ್ಯ ಕನ್ವರ್ಟ್ ಕಾಂಗ್ರೆಸ್: ಸಚಿವ ಬಿ.ಸಿ.ನಾಗೇಶ್