ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಧ್ರುವನಾರಾಯಣ - Mahanayaka
1:15 AM Wednesday 11 - December 2024

ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣ: ಧ್ರುವನಾರಾಯಣ

druvanarayana
09/02/2022

ಚಾಮರಾಜನಗರ: ಹಿಜಾಬ್- ಕೇಸರಿ ಶಾಲು ವಿವಾದಕ್ಕೆ ಬಿಜೆಪಿ ಕಾರಣವಾಗಿದ್ದು, ಮುಗ್ಧ ಮಕ್ಕಳನ್ನು ಬಳಸಿಕೊಂಡು ರಾಜ್ಯದಲ್ಲಿ ಕೋಮುದಳ್ಳುರಿ ಸೃಷ್ಟಿಸುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಆರೋಪಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಂ ವಿದ್ಯಾರ್ಥಿನಿಯರು ಹಿಂದಿನಿಂದಲೇ ಹಿಜಾಬ್ ಹಾಕಿಕೊಂಡೇ ಶಾಲಾ ಕಾಲೇಜಿಗೆ ಬರುತ್ತಿದ್ದುದು ಈಗಲ್ಲ. ಆದರೆ, ಕೆಲವು ದಿನಗಳಿಂದ ಈ ಸಮಸ್ಯೆ ಉಂಟಾಗಿದೆ. ಬಿಜೆಪಿ ಮುಖಂಡರು ಹಿನ್ನಲೆಯಲ್ಲಿದ್ದುಕೊಂಡು ಈ ವಿವಾದವನ್ನು ಹುಟ್ಟುಹಾಕುತ್ತಿದ್ದಾರೆ ಎಂದು ದೂರಿದರು.

ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಬಿಜೆಪಿ ಸರ್ಕಾರ ಅವುಗಳನ್ನು‌ ನಿವಾರಿಸಲು ಗಮನಹರಿಸುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಕಂಡು ಬರುತ್ತಿರುವಾಗಲೇ, ಜನರನ್ನು ದಿಕ್ಕು ತಪ್ಪಿಸಲು ಬಿಜೆಪಿಯು ಶಾಲಾ ಕಾಲೇಜುಗಳ ಮುಗ್ಧ ಮಕ್ಕಳನ್ನು ಬಳಸಿಕೊಂಡು ಕೋಮುಗಲಭೆ ಸೃಷ್ಟಿಸುತ್ತಿದೆ’ ಎಂದರು.ವಿದ್ಯಾರ್ಥಿಗಳು ತಮ್ಮನ್ನು ವಿಭಜಿಸುವ ಶಕ್ತಿಗಳ ಬಗ್ಗೆ ಗಮನ ಹರಿಸಬಾರದು ಎಂದು ಅವರು ಮನವಿ ಮಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ: ಪ್ರಿಯಾಂಕಾ ಗಾಂಧಿ

ಮಹಿಳೆಯರು ಹಾಕುವ ಬಟ್ಟೆಯಿಂದ ಪುರುಷರು ಉದ್ರೇಕವಾಗುತ್ತಾರೆ: ರೇಣುಕಾಚಾರ್ಯ

ಎಟಿಎಂಗೆ ಹಾನಿ ಮಾಡಿ ಹಣ ಕಳವಿಗೆ ಯತ್ನ: ಆರೋಪಿಯ ಬಂಧನ

ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಲಾರಿ ಚಾಲಕ ಸಾವು

 

ಇತ್ತೀಚಿನ ಸುದ್ದಿ