ಹಿಜಾಬ್ ವಿಚಾರ: ಹೈಕೋರ್ಟ್ ತೀರ್ಪಿಗೆ ಎಲ್ಲರೂ ತಲೆಬಾಗಬೇಕು; ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿದ ತೀರ್ಪು ಸ್ವಾಗತಾರ್ಹ. ವಿದ್ಯಾರ್ಥಿಗಳು, ಪೋಷಕರು ಸೇರಿ ಎಲ್ಲರೂ ಹೈಕೋರ್ಟ್ ತೀರ್ಪುನ್ನು ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಶಿಕ್ಷಣ ಮುಖ್ಯ ಎಂಬುದನ್ನು ಮನಗಂಡು ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಬೇಕು. ಪರೀಕ್ಷೆಗಳಿಗೆ ಕುಳಿತುಕೊಳ್ಳಬೇಕು. ಭವಿಷ್ಯ ರೂಪಿಸುವುದರತ್ತ ಗಮನ ಹರಿಸಿ ಎಂದವರು ಹೇಳಿದರು.
ತೀರ್ಪಿಗೆ ಎಲ್ಲರೂ ತಲೆಬಾಗಬೇಕು. ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಗೃಹ ಇಲಾಖೆ ಸಿದ್ಧವಿದೆ ಎಂದವರು ಇದೇ ವೇಳೆ ಸೂಚನೆ ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ನಮ್ಮ ಪ್ರಾಂಶುಪಾಲರು ಪ್ರತಿದಿನ ಕುರಾನ್, ಬೈಬಲ್, ಭಗವದ್ಗೀತೆ ಓದಿಸುತ್ತಿದ್ದರು: ಮುಸ್ಕಾನ್
ವಿಪರೀತ ಶಾಖದಲ್ಲಿ ದೇಹವನ್ನು ತಂಪಾಗಿಸಲು ಏನು ಕುಡಿಯಬೇಕು? ಏನು ತಪ್ಪಿಸಬೇಕು?
ಉತ್ತರ ಪ್ರದೇಶದಲ್ಲಿ ಹಿಂಸಾಚಾರ: ಕಕ್ರಾಲಾ ಪ್ರದೇಶದಲ್ಲಿ ಹಲ್ಲೆ, ಗುಂಡಿನ ದಾಳಿ
ಸರ್ಕಾರದ ‘ವಸ್ತ್ರ ಸಂಹಿತೆ’ ಆದೇಶ ಕಾನೂನುಬದ್ಧವಾಗಿದೆ ಎಂದ ಹೈಕೋರ್ಟ್
ಇಂದು ಹಿಜಾಬ್ ತೀರ್ಪು: ಉಡುಪಿ, ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ