ಕೊನೆಗೂ ಪಕ್ಷದ ನಾಯಕರ ಒತ್ತಡಕ್ಕೆ ಮಣಿದು ಹೇಳಿಕೆ ಹಿಂಪಡೆದ ಸತೀಶ್ ಜಾರಕಿಹೊಳಿ
ಬೆಂಗಳೂರು: ಹಿಂದೂ ಪದ ಭಾರತದ್ದಲ್ಲ, ಪರ್ಷಿಯನ್ ಭಾಷೆಯದ್ದು. ಪರ್ಷಿಯನ್ ಭಾಷೆಯಲ್ಲಿ ಅದು ಅಶ್ಲೀಲ ಅರ್ಥವನ್ನು ಹೊಂದಿದೆ ಎಂಬ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಪಸ್ ಪಡೆದುಕೊಂಡಿದ್ದಾರೆ.
ಸದ್ಯ ನಡೆಯುತ್ತಿರುವ ಚರ್ಚೆಗಳ ಪ್ರಕಾರ ಕಾಂಗ್ರೆಸ್ ನಾಯಕರ ತೀವ್ರ ಒತ್ತಡದ ಬಳಿಕ ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
ಈ ಬಗ್ಗೆ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿರುವ ಸತೀಶ್ ಜಾರಕಿಹೊಳಿ, ಹಿಂದೂ ಪದದ ಬಗ್ಗೆ ನೀಡಿರುವ ಹೇಳಿಕೆ ಬಗ್ಗೆ ತಂಡ ರಚನೆ ಮಾಡಿ ತನಿಖೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೇ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಬಾರದು ಎಂಬ ಸದುದ್ದೇಶದಿಂದ ಅಂದು ನಾನು ಹೇಳಿದ ಆ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಮತ್ತು ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
2022ರ ಅಕ್ಟೋಬರ್ 6ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಈ ಹೇಳಿಕೆ ನೀಡಿದ್ದರು. ಸತೀಶ್ ಜಾರಕಿಹೊಳಿ ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಪಕ್ಷದ ಸಾಕಷ್ಟು ನಾಯಕರು ಮೌನವಾಗಿದ್ದು, ಸತೀಶ್ ಪರವಾಗಿ ನಿಲ್ಲದೇ, ಹೇಳಿಕೆ ಹಿಂಪಡೆಯುವಂತೆ ಒತ್ತಡ ಹಾಕಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ.
ಇನ್ನು ಬೆಂಗಳೂರಿನಲ್ಲಿ ವಕೀಲ ದಿಲೀಪ್ ಕುಮಾರ್ ಎಂಬುವರು ಸತೀಶ್ ಜಾರಕಿಹೊಳಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.. ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ನಲ್ಲಿ ದಿಲೀಪ್ ಖಾಸಗಿ ದೂರು ದಾಖಲಿಸಿದ್ದಾರೆ.
2022ರ ಅಕ್ಟೋಬರ್ 6ರಂದು ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಇದರ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ ಅವರು, ಈ ಹೇಳಿಕೆ ನೀಡಿದ್ದರು. ಇನ್ನು ಸತೀಶ್ ಜಾರಕಿಹೊಳಿಯವರು ಕೂಡಲೇ ಜನರ ಕ್ಷಮೆ ಕೇಳಬೇಕೆಂದು ಬಿಜೆಪಿ ನಾಯಕರು ತೀವ್ರ ಪಟ್ಟು ಹಿಡಿದಿದ್ದು ಇಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka