ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿದ್ದು ರಾಜೀನಾಮೆ - Mahanayaka
10:50 AM Friday 22 - November 2024

ಹೀನಾಯ ಸೋಲಿನ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಿದ್ದು ರಾಜೀನಾಮೆ

sidhu
16/03/2022

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.  ಸೋನಿಯಾ ಗಾಂಧಿ ಅವರ ಸೂಚನೆ ಮೇರೆಗೆ ರಾಜೀನಾಮೆ ನೀಡಲಾಗಿದೆ.  ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪತನಗೊಂಡ ನಂತರ ಸೋನಿಯಾ ಗಾಂಧಿ ಅವರು ಪಿಸಿಸಿ ಅಧ್ಯಕ್ಷರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ.

“ಕಾಂಗ್ರೆಸ್ ಅಧ್ಯಕ್ಷರು ಬಯಸಿದಂತೆ ನಾನು ನನ್ನ ರಾಜೀನಾಮೆ ಪತ್ರವನ್ನು ಕಳುಹಿಸಿದ್ದೇನೆ” ಎಂದು ಸಿಧು ತಮ್ಮ ರಾಜೀನಾಮೆಯ ಪ್ರತಿಯೊಂದಿಗೆ ಟ್ವಿಟರ್‌ ನಲ್ಲಿ ಬರೆದಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲಾ, ರಾಜ್ಯಗಳಲ್ಲಿ ಕಾಂಗ್ರೆಸ್ ಘಟಕಗಳ ಮರುಸಂಘಟನೆಗೆ ಅನುಕೂಲವಾಗುವಂತೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.

ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರದ ಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ ಎಂದು ಸುರ್ಜೇವಾಲಾ ಟ್ವೀಟ್ ಮಾಡಿದ್ದಾರೆ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಚೀನಾದ ಬೆನ್ನಲ್ಲೇ ದಕ್ಷಿಣ ಕೊರಿಯಾದಲ್ಲಿ  ಕೊರೊನಾ  ಭೀತಿ

ಬರೋಬ್ಬರಿ 4 ಸಾವಿರಕ್ಕೂ ಹೆಚ್ಚು ಥಿಯೇಟರ್​​ ನಲ್ಲಿ ನಾಳೆ ಜೇಮ್ಸ್​ ರಿಲೀಸ್​​

ಪ್ರಜಾಪ್ರಭುತ್ವಕ್ಕೆ ಫೇಸ್‍ಬುಕ್ ಮಾರಕ: ರಾಹುಲ್ ಗಾಂಧಿ ಆರೋಪ

ಉಕ್ರೇನ್‌ ನ ಮಾರಿಯುಪೋಲ್ ಆಸ್ಪತ್ರೆಯನ್ನು ವಶಕ್ಕೆ ಪಡೆದ ರಷ್ಯಾ ಸೇನೆ

ನಾಳೆ ಕರ್ನಾಟಕ ಬಂದ್‌ ಗೆ ಮುಸ್ಲಿಂ ಸಂಘಟನೆ ಕರೆ

 

ಇತ್ತೀಚಿನ ಸುದ್ದಿ