ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ತಂದೆಯಿಂದಲೇ ಅತ್ಯಾಚಾರ!
18/06/2021
ಸುರತ್ಕಲ್: ತನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ಜನ್ಮ ನೀಡಿದ ತಂದೆಯೇ ನಿರಂತರವಾಗಿ ಅತ್ಯಾಚಾರ ನಡೆಸಿರುವ ಘಟನೆ ಗುರುವಾರ ಬೆಳಕಿಗೆ ಬಂದಿದ್ದು, ಇದೀಗ ಪತ್ನಿಯ ದೂರಿನಂತೆ ಆರೋಪಿ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ ಎಂದು ವರದಿಯಾಗಿದ್ದು, ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಆರೋಪಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದು, ಪತ್ನಿಗೂ ನಿರಂತರವಾಗಿ ಟಾರ್ಚರ್ ನಡೆಸಿದ್ದ ಎಂದು ಹೇಳಲಾಗಿದೆ.
ಈತನ ವಿಕೃತಿಯನ್ನು ಸಹಿಸಲಾಗದೇ ಪತ್ನಿ ಹಾಗೂ ಮಕ್ಕಳು ಮನೆ ಬಿಟ್ಟು ಹೋಗಿ ತಮ್ಮ ಮಾವನ ಬಳಿಯಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಆ ಬಳಿಕ ಆತನ ವಿರುದ್ಧ ದೂರು ನೀಡಲು ಅವರು ಮುಂದಾಗಿದ್ದು, ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.