ನೋಟಿಸ್ ಬೆನ್ನಲ್ಲೇ ಯತ್ನಾಳ್ ಗೆ ಹೈಕಮಾಂಡ್ ಬುಲಾವ್: ಕುತೂಹಲ ಕೆರಳಿಸಿದ ಬಣ ರಾಜಕೀಯ!
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ತೊಡೆತಟ್ಟಿರುವ ಯತ್ನಾಳ್ ಗೆ ಹೈಕಮಾಂಡ್ ಸ್ಪಷ್ಟನೆ ಕೇಳಿ ನೋಟಿಸ್ ನೀಡಿದೆ. ಇದೀಗ ನೋಟಿಸ್ ಬೆನ್ನಲ್ಲೇ ಯತ್ನಾಳ್ ಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದ್ದು, ಈ ಹಿನ್ನೆಲೆಯಲ್ಲಿ ಯತ್ನಾಳ್ ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣದ ಮೂಲಕ ಯತ್ನಾಳ್ ದೆಹಲಿಗೆ ತೆರಳಿದ್ದಾರೆ. ಇದೇ ವಿಮಾನದಲ್ಲಿ ಸಂಸದ ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ ಹಾಗೂ ಕಾಗೇರಿ ಕೂಡ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದು ಬಂದಿದೆ.
ಯತ್ನಾಳ್ ಅವರ ದೆಹಲಿ ಭೇಟಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯ ನಾಯಕರ ವಿರುದ್ಧ ಯತ್ನಾಳ್ ಪದೇ ಪದೇ ಹೇಳಿಕೆ ನೀಡುತ್ತಿದ್ದರೂ ಅವರ ವಿರುದ್ಧ ಕ್ರಮಕ್ಕೆ ಹೈಕಮಾಂಡ್ ಮುಂದಾಗಿರಲಿಲ್ಲ. ಇದೀಗ ನಡೆಯುತ್ತಿರುವ ಬೆಳವಣಿಗೆಯಲ್ಲಿ ರಾಜಿ ಸಂಧಾನ ನಡೆಯುತ್ತೋ, ಅಥವಾ ಯತ್ನಾಳ್ ಉಚ್ಛಾಟನೆ ನಡೆಯುತ್ತೋ ಎನ್ನುವುದನ್ನು ಕಾದು ನೋಡಬೇಕಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: