ಟಿಕೆಟ್ ಸಿಗದ ನೋವಿಗೆ ಹೈಕಮಾಂಡ್ ಮುಲಾಮು: ರಾಜಕೀಯ ನಿವೃತ್ತಿ ನಿರ್ಧಾರ ಕೈಬಿಟ್ಟ ಎಸ್.ಅಂಗಾರ

ಸಚಿವರಾಗಿದ್ದ ಎಸ್. ಅಂಗಾರ ರಾಜಕೀಯ ನಿವೃತ್ತಿ ವಿಚಾರದಲ್ಲಿ ಉಲ್ಟಾ ಹೊಡೆದಿದ್ದಾರೆ. ನಾನು ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತೇನೆ. ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ. ಚುನಾವಣಾ ಪ್ರಚಾರಕ್ಕೂ ಹೋಗುತ್ತೇನೆ ಎಂದು ಸಚಿವ ಎಸ್.ಅಂಗಾರ ಹೇಳಿದ್ದಾರೆ. ಅವರು ಸುಳ್ಯ ಪ್ರೆಸ್ ಕ್ಲಬ್ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಾನು ರಾಜಕೀಯ ನಿವೃತ್ತಿ ಘೋಷಣೆಯನ್ನು ಹಿಂಪಡೆದಿದ್ದೇನೆ. ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕದಲ್ಲಿ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಎಸ್.ಅಂಗಾರ ತಿಳಿಸಿದ್ದಾರೆ.
7 ಬಾರಿ ಸ್ಪರ್ಧೆ ಮಾಡಿದಾಗಲೂ ನಾನೆಂದೂ ನನಗೆ ಟಿಕೆಟ್ ಕೊಡಿ ಎಂದು ಕೇಳಿಕೊಂಡವನಲ್ಲ. ಟಿಕೆಟ್ ಗಾಗಿ ಲಾಬಿ ಮಾಡಿದವನೂ ಅಲ್ಲ. ಇಷ್ಟು ಬಾರಿಯೂ ಪಕ್ಷವೇ ನನಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತ್ತು. ನನ್ನ ಸಾರ್ವಜನಿಕ ಜೀವನದಲ್ಲಿ ನಾನೆಂದೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನೂ ಅಲ್ಲ. ನನ್ನ ಜೀವನ ತೆರೆದ ಪುಸ್ತಕ ಯಾರು ಬೇಕಾದರೂ ಓದಬಹುದು ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw