ಚಕ್ರವರ್ತಿ ಸೂಲಿಬೆಲೆ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್!

ಕಲಬುರಗಿ: ಬಿಜೆಪಿ ಪರ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಅವರ ನಮೋ ಭಾರತ್ ಕಾರ್ಯಕ್ರಮಕ್ಕೆ ಕಲಬುರಗಿ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಇದೀಗ ಜಿಲ್ಲಾಡಳಿತದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ ನ ಕಲಬುರಗಿ ಪೀಠ ತೆರವುಗೊಳಿಸಿದೆ.
ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದ ಬಾಪುರಾವ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಮೋ ಭಾರತ್ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ನೀಡಿದ್ದ ಅನುಮತಿಯನ್ನು ಜಿಲ್ಲಾಡಳಿತ ರದ್ದುಪಡಿಸಿ, ಸೂಲಿಬೆಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು. ಈ ನಿರ್ಬಂಧವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದ್ದು, ಹೈಕೋರ್ಟ್ ನಿರ್ಬಂಧ ತೆರವುಗೊಳಿಸಿದೆ.
ಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿರುವ ಚಕ್ರವರ್ತಿ ಸೂಲಿಬೆಲೆ, ಚಿತ್ತಾಪುರದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ತಡೆಯುವ ಪ್ರಯತ್ನ ನಡೆದಿತ್ತು. ಆದರೆ ಬಾಬಾ ಸಾಹೇಬರು ಸಂವಿಧಾನ ಎಂಬ ಒಂದು ಶಕ್ತಿಯನ್ನು ಕೊಟ್ಟಿದ್ದಾರೆ. ಆ ಶಕ್ತಿಯ ಫಲವಾಗಿ ನಾವು ಕೋರ್ಟ್ ನಲ್ಲಿ ಹೋರಾಟ ಮಾಡಿದ್ದೇವೆ. ಕೋರ್ಟ್ ಕಾರ್ಯಕ್ರಮಕ್ಕೆ ಅನುಮತಿ ನೀಡಿದೆ ಎಂದು ತಿಳಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth