ಮಾಸ್ಕ್ ಧರಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ | ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ - Mahanayaka

ಮಾಸ್ಕ್ ಧರಿಸದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಿ | ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ

23/10/2020

ಬೆಂಗಳೂರು:  ಮಾಸ್ಕ್ ಧರಿಸದ ಹಾಗೂ ವ್ಯಕ್ತಿ ಅಂತರ ಕಾಪಾಡದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ.

ಸಾಯಿದತ್ತ ಎಂಬವರು ಸಲ್ಲಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35 ಪ್ರತಿಭಟನೆಗಳು ನಡೆದಿವೆ. ಇಲ್ಲಿ ಕೋವಿಡ್ ನಿಯಮಗಳೇ ಪಾಲನೆಯಾಗಿಲ್ಲ. ಹೀಗಾಗಿ ಪ್ರತಿಭಟನೆಗಳನ್ನು ನಿರ್ಬಂಧಿಸಬೇಕು ಎಂದು ಕೋರಲಾಗಿತ್ತು.  ಅಲ್ಲದೇ ಸೆಪ್ಟೆಂಬರ್ 25ರಂದು ನಡೆದ ಪ್ರತಿಭಟನೆ ಆಯೋಜಕರಲ್ಲಿ ಒಬ್ಬರಾದ ಹೋರಾಟಗಾರ ಮಾರುತಿ ಮಾನ್ಪಡೆ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಅರ್ಜಿದಾರರ ವಕೀಲರು ಕೋರ್ಟ್ ನ ಗಮನಕ್ಕೆ ತಂದರು.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಪ್ರತಿಭಟನೆಯ ಚಿತ್ರಗಳನ್ನು ನೋಡಿದರೆ ಮಾಸ್ಕ್ ಧರಿಸದ ಹಲವರು ಕಾಣಿಸುತ್ತಾರೆ. ಅಂತರ ಕಾಪಾಡಬೇಕು ಎಂಬ ನಿಯಮ ಸಂಪೂರ್ಣ ಉಲ್ಲಂಘನೆಯಾಗಿದೆ. ಇದು ಕೋವಿಡ್ ಹರಡಲು ಕಾರಣವಾಗಿದೆ. ಈ ರೀತಿಯ ಉಲ್ಲಂಘನೆ ತಡೆಯಲು ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಪ್ರಾಧಿಕಾರಿಗಳು ದೊಡ್ಡದಾಗಿ ಕಾರ್ಯಾಚರಣೆಗೆ ಇಳಿಯಬೇಕು ಯಾವುದೇ ಮುಲಾಜಿಲ್ಲದೇ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದೆ.

ಇತ್ತೀಚಿನ ಸುದ್ದಿ