ಹೈಕೋರ್ಟ್ ವಕೀಲ ಅಬ್ದುಲ್ ಫಾರೂಕ್ ಹೃದಯಾಘಾತದಿಂದ ನಿಧನ
ಹೈಕೋರ್ಟ್ ವಕೀಲ ಹಾಗೂ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ನಿವಾಸಿ ಅಬ್ದುಲ್ ಫಾರೂಕ್ (49) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶ ಅಬ್ದುಲ್ ನಝೀರ್ ಅವರ ಕಿರಿಯ ಸಹೋದರ ಆಗಿರುವ ಅಬ್ದುಲ್ ಫಾರೂಕ್ ಅವರ ಮೃತದೇಹ ಬೆಳುವಾಯಿಗೆ ತರಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದ ಅವರು ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಅವರು ಪತ್ನಿ, ಪುತ್ರ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka