ಶರಣ್ ಪಂಪ್'ವೆಲ್ ಮತ್ತಿತರರ ವಿರುದ್ಧ ದಾಖಲಾಗಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ಹೈಕೋರ್ಟ್ ತಡೆ - Mahanayaka
11:28 PM Thursday 14 - November 2024

ಶರಣ್ ಪಂಪ್’ವೆಲ್ ಮತ್ತಿತರರ ವಿರುದ್ಧ ದಾಖಲಾಗಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ಹೈಕೋರ್ಟ್ ತಡೆ

sharan pompuwell
20/10/2023

ಮಂಗಳೂರು ನಗರದ ಮಂಗಳಾದೇವಿ ನವರಾತ್ರಿ ಉತ್ಸವದ ಸಂದರ್ಭ ಮತೀಯ ಸೌಹಾರ್ದಕ್ಕೆ ಧಕ್ಕೆ ತರುವ ಚಟುವಟಿಕೆ ನಡೆಸಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್‌ನ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಪೊಲೀಸರು ದಾಖಲಿಸಿದ್ದ ಸ್ವಯಂ ಪ್ರೇರಿತ ಪ್ರಕರಣಕ್ಕೆ ರಾಜ್ಯ ಹೈಕೋರ್ಟ್ ತಡೆ ನೀಡಿದೆ.

ಅಕ್ಟೋಬರ್ 16ರಂದು ಮಂಗಳಾದೇವಿ ದೇವಸ್ಥಾನದ ಬಳಿಯ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್‌ವೆಲ್ ಮತ್ತಿತರರು ಕೇಸರಿ ಧ್ವಜ ಕಟ್ಟಿ ಹಿಂದೂಗಳ ಅಂಗಡಿಗಳಲ್ಲೇ ವ್ಯಾಪಾರ ನಡೆಸುವಂತೆ ಕರೆ ನೀಡಿದ್ದರು. ಇದರ ವಿರುದ್ಧ ಮಂಗಳೂರಿನ ಸಮಾನ ಮನಸ್ಕರ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ಗೆ ಮನವಿ ಸಲ್ಲಿಸಿ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದರು.

ಆ ಬಳಿಕ ಶರಣ್ ಪಂಪ್‌ವೆಲ್ ಮತ್ತಿತರರ ವಿರುದ್ಧ ಪಾಂಡೇಶ್ವರ ಪೊಲೀಸರು ಬುಧವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದರು. ಇದರ ವಿರುದ್ಧ ಶರಣ್ ಪಂಪ್‌ವೆಲ್ ಹೈಕೋರ್ಟ್ ಮೆಟ್ಟಿಲೇರಿದ್ದು, ಪೊಲೀಸರು ದಾಖಲಿಸಿದ ಸ್ವಯಂಪ್ರೇರಿತ ದೂರಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯವಾದಿ ಅರುಣ್ ಶ್ಯಾಮ್ ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಇತ್ತೀಚಿನ ಸುದ್ದಿ