ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿ
ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ವಿದ್ಯಾರ್ಥಿನಿಯೋರ್ವಳು ಅರ್ಜಿ ಸಲ್ಲಿಸಿದ್ದಾರೆ.
ನಿಬಾ ನಾಜ್ ಎಂಬ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿ, ವಕೀಲ ಅನಸ್ ತನ್ವೀರ್ ಅವರ ಮೂಲಕ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ. ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಅಲ್ಲ. ತರಗತಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ.
ಹಿಜಾಬ್ ಧರಿಸುವುದು ಇಸ್ಲಾಮಿಕ್ ನಂಬಿಕೆಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಲ್ಲ. ಹೀಗಾಗಿ ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ರಕ್ಷಿಸಲ್ಪಟ್ಟಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಪೂರ್ಣ ಪೀಠವು ತೀರ್ಪು ನೀಡಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
12ರಿಂದ 15 ವರ್ಷದ ಮಕ್ಕಳಿಗೆ ಇಂದಿನಿಂದ ಕೊವಿಡ್ ಲಸಿಕಾ ಅಭಿಯಾನ
ದೆಹಲಿಯ ಹೊರಗೆ ಮೊದಲ ಬಾರಿಗೆ AAP ಸಿಎಂ; ಇಂದು ಪಂಜಾಬ್ ನಲ್ಲಿ ಭಗವಂತ್ ಮಾನ್ ಅಧಿಕಾರಕ್ಕೆ
ನಿಲ್ಲಿಸಿದ್ದ ಲಾರಿಗೆ ಕಾರು ಡಿಕ್ಕಿ: ನಿವೃತ್ತ ಎಸ್ ಐ ಪತ್ನಿ ಸಾವು
OTT ಗೆ ಸೆಲ್ಯೂಟ್; ದುಲ್ಕರ್ ನಿರ್ಮಾಣ ಕಂಪನಿಯನ್ನು ಬ್ಯಾನ್ ಮಾಡಿದ ಫಿಯೋಕ್