ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ : ಉಪೇಂದ್ರ

15/08/2023
ಗಾದೆಯ ಹೆಸರಿನಲ್ಲಿ ಜಾತಿಯ ಹೆಸರೆತ್ತಿ ಅವಮಾನಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನಿನ ಸಂಕಷ್ಟ ಎದುರಿಸುತ್ತಿರುವ ನಟ ಉಪೇಂದ್ರ, ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐಆರ್ ಗಳಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದ ಬಳಿಕ ಟ್ವೀಟ್ ಮಾಡಿದ್ದಾರೆ.
ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ
ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ
ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ
ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ…
ನನಗೆ ಕೊಡೆ
ಧನ್ಯವಾದಗಳು, ಎಂದು ಬರೆದು ಕೊಂಡಿದ್ದಾರೆ.