ಇಂದು ಹಿಜಾಬ್ ತೀರ್ಪು: ಉಡುಪಿ, ದ.ಕ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆರಂಭವಾಗಿ ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತ್ರಿಸದಸ್ಯ ಪೀಠದಿಂದ ಇಂದು ತೀರ್ಪು ನೀಡಲಿದೆ.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಮಾಹಿತಿ ನೀಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಲ್ಲದೇ ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ ಮೂಲದ ವಿದ್ಯಾರ್ಥಿನಿಯರು ಸೇರಿದಂತೆ ಹಲವರು ಹಿಜಾಬ್ ಧರಿಸಿ ಕಾಲೇಜಿಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ವಿವಾದದ ಬಗ್ಗೆ ಸುರ್ಧೀರ್ಘ ವಿಚಾರಣೆ ನಡೆಸಿರುವ ಸಿಜೆ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್. ದೀಕ್ಷಿತ್, ನ್ಯಾ.ಖಾಜಿ ನೇತೃತ್ವದ ತ್ರಿಸದಸ್ಯ ಪೀಠ ಇಂದು ಬೆಳಗ್ಗೆ 10:30ಕ್ಕೆ ತೀರ್ಪು ಪ್ರಕಟಿಸಲಿದೆ.
ರಾಜ್ಯ ಹಾಗೂ ದೇಶದ ಜನರಿಗೆ ಸಾಕಷ್ಟು ಕುತೂಹಲ ಮೂಡಿಸಿರುವ ಹಿಜಾಬ್ ಪ್ರಕರಣ ತೀರ್ಪು ಇಂದು ಹೊರ ಬೀಳಲಿದ್ದು, ಸದ್ಯ ಎಲ್ಲರ ಗಮನ ಹೈಕೋರ್ಟ್ ತೀರ್ಪಿನ ಮೇಲಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಮಹಿಳೆಯ ಮಂಗಲ್ಯ ಸರ ಅಪಹರಣ
ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ: ಮಹಿಳೆ ಮೃತ್ಯು
ಸಿಎಂ ಇಬ್ರಾಹಿಂಗೆ ದುರಾಸೆ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗಿದ್ದಾರೆ: ಮಾಜಿ ಸಿಎಂ ಸಿದ್ದರಾಮಯ್ಯ