SSLC  ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ನೀಡಿದ್ದಕ್ಕೆ 7 ಸಿಬ್ಬಂದಿ ಅಮಾನತು - Mahanayaka
8:07 PM Thursday 12 - December 2024

SSLC  ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ನೀಡಿದ್ದಕ್ಕೆ 7 ಸಿಬ್ಬಂದಿ ಅಮಾನತು

hijab
30/03/2022

ಗದಗ: SSLC  ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಕೊಠಡಿಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ್ದಕ್ಕೆ ಪರೀಕ್ಷಾ ಕೇಂದ್ರದ ಇಬ್ಬರು ಮುಖ್ಯ ಅಧೀಕ್ಷಕರು ಹಾಗೂ ಐವರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಗದಗ ನಗರದ ಸಿ.ಎಸ್.ಪಾಟೀಲ್ ಬಾಲಕರ ಹಾಗೂ ಬಾಲಕಿಯರ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.

ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಕ್ಕೆ ಶಿಸ್ತು ಕ್ರಮ ಜರುಗಿಸಲಾಗಿದೆ. ಮಾರ್ಚ್ 28ರಂದು ನಡೆದಿದ್ದ ಪ್ರಥಮ ಭಾಷೆ ಪರೀಕ್ಷೆ ವೇಳೆ ಹಿಜಾಬ್ ಗೆ ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವರದಿ ಹಿನ್ನೆಲೆ ಕ್ರಮಕೈಗೊಳ್ಳಲಾಗಿದೆ.

ಪರೀಕ್ಷಾ ಕೇಂದ್ರದ ಅಧೀಕ್ಷಕರು ಕೆ.ಬಿ.ಭಜಂತ್ರಿ, ಬಿ.ಎಸ್.ಹೊನ್ನಗುಡಿ, ಕೊಠಡಿ ಮೇಲ್ವಿಚಾರಕರಾದ ಎಸ್.ಜಿ.ಗೋಡಕೆ, ಎಸ್.ಎಸ್.ಗುಜಮಾಗಡಿ, ವಿ.ಎನ್.ಕಿವುಡರ್, ಎಸ್ ಯು. ಹೊಕ್ಕಳದ, ಎಸ್.ಎಮ್.ಪತ್ತಾರ ಸೇರಿದಂತೆ ಏಳು ಜನರನ್ನು ತಕ್ಷಣಕ್ಕೆ ಜಾರಿಯಾಗುವಂತೆ ಅಮಾನತು ಮಾಡಿ ಗದಗ ಡಿಡಿಪಿಐ ಜಿ ಎಮ್ ಬಸವಲಿಂಗಪ್ಪ ಆದೇಶಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೈ ಮುಟ್ಟಿದ ವಕೀಲನಿಗೆ ಚೇರ್‌ನಿಂದ ಹಲ್ಲೆಗೆ ಮುಂದಾದ ವಕೀಲೆ

ಹಿಜಬ್ ಧರಿಸಿ ಪರೀಕ್ಷೆಗೆ ಅವಕಾಶ: 7 ಮಂದಿ ಅಮಾನತು

ಅಸ್ಪೃಶ್ಯತೆ ಆಚರಿಸುವವರಿಗೆ ಚಾಟಿ ಬೀಸಲು ಸಿದ್ಧವಾಗ್ತಿದೆ ರಾಜ್ಯ ಬಿಜೆಪಿ ಸರ್ಕಾರ!

ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಮಹಿಳೆಯ ಬ್ಯಾಗ್ ಎಗರಿಸಿದ ಕಳ್ಳನ ಬಂಧನ!

ಬಸ್,  ದ್ವಿಚಕ್ರ ವಾಹನದ ನಡುವೆ ಅಪಘಾತ: ಹೆಡ್ ಕಾನ್ಸ್‌ಟೇಬಲ್ ಗೆ ಗಂಭೀರ ಗಾಯ

ಇತ್ತೀಚಿನ ಸುದ್ದಿ