11:03 AM Wednesday 12 - March 2025

ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆ: ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

hijab1
14/02/2022

ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನೇ ಬಹಿಷ್ಕರಿಸಿರುವ ಘಟನೆ ಶಿವಮೊಗ್ಗದ ಬಿ.ಎಚ್.ರಸ್ತೆಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದಿದೆ.

ಜಿಲ್ಲಾದ್ಯಂತ ಇಂದು ಎಸ್​ಎಸ್​ಎಲ್​ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯುತ್ತಿದೆ. ಆದರೆ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ ಶಿವಮೊಗ್ಗದ ಮೇನ್ ಮಿಡ್ಲ್ ಸ್ಕೂಲ್​ನ 13 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬಹಿಷ್ಕಾರಿಸಿದ್ದಾರೆ.

ಜಿಲ್ಲೆಯಲ್ಲಿ ಹಿಜಾಬ್​ ಹಾಗೂ ಕೇಸರಿ ಶಾಲು ಸಂಘರ್ಷ ಹೆಚ್ಚಾದ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಇಂದಿನಿಂದ ತರಗತಿಗಳು ಆರಂಭವಾಗಿದ್ದು, ಕೋರ್ಟ್​ ಆದೇಶದಂತೆ ಹಿಜಾಬ್​ ಹಾಗೂ ಕೇಸರಿ ಶಾಲು ಧರಿಸಿ ಬರುವುದಕ್ಕೆ ಶಾಲಾ ಆಡಳಿತ ಮಂಡಳಿ ನಿರ್ಬಂಧ ವಿಧಿಸಿದೆ. ವಿದ್ಯಾರ್ಥಿನಿಯರಿಗೆ ಶಿಕ್ಷಕರು ಹಿಜಬ್, ಬುರ್ಖಾ ತೆಗೆಯುವಂತೆ ಸೂಚಿಸಿದ್ದರು.

ಕೆಲವು ವಿದ್ಯಾರ್ಥಿನಿಯರು ಬುರ್ಖಾ, ಹಿಜಬ್ ತೆಗೆದಿಟ್ಟು ಪರೀಕ್ಷೆಗೆ ಹಾಜರಾಗಿದ್ದರು. ಆದರೆ ಪರೀಕ್ಷೆ ಆರಂಭಕ್ಕೂ ಮೊದಲು ಕೆಲವು ವಿದ್ಯಾರ್ಥಿನಿಯರು ನಾವು ಹಿಜಬ್ ಧರಿಸಿಯೇ ಪರೀಕ್ಷೆ ಬರೆಯುತ್ತೇವೆ. ಇಲ್ಲದಿದ್ದರೆ ಪರೀಕ್ಷೆ ಬರೆಯುವುದಿಲ್ಲ ಎಂದು ತಗಾದೆ ತೆಗೆದಿದ್ದಾರೆ. ಇದಕ್ಕೆ ಒಪ್ಪದ ಶಿಕ್ಷಕರು ಎಲ್ಲರೂ ಕರ್ನಾಟಕ ಹೈಕೋರ್ಟ್ ಆದೇಶ ಪಾಲನೆ ಮಾಡಬೇಕು. ಹಿಜಬ್ ತೆಗೆದರೆ ತರಗತಿಯಲ್ಲಿ ಇರಿ, ಇಲ್ಲದಿದ್ದರೆ ಹೊರಗೆ ಹೋಗಿ ಎಂದಿದ್ದಾರೆ.

ವಿದ್ಯಾರ್ಥಿನಿಯರು ಮರು ಮಾತನಾಡದೇ ನಾವು ಬೇಕಾದರೆ ಪರೀಕ್ಷೆ ಬಹಿಷ್ಕರಿಸುತ್ತೇವೆ. ಹಿಜಬ್ ತೆಗೆಯುವುದಿಲ್ಲ ಎಂದು ಶಾಲೆಯಿಂದ ಮನೆಗೆ ತೆರಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಮೋದಿ ಸರ್ಕಾರ ಕಿತ್ತೊಗೆಯುವ ಸಮಯ ಹತ್ತಿರವಾಗಿದೆ: ತೆಲಂಗಾಣ ಸಿಎಂ ಕೆಸಿಆರ್

ಆನ್‍ಲೈನ್ ಗೇಮಿಂಗ್ ನಿಷೇಧ: ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಮದುವೆ ಮೆರವಣಿಗೆಯಲ್ಲಿ ಸುಡುಮದ್ದು ಸ್ಫೋಟ: ಓರ್ವ ಸಾವು, ಇಬ್ಬರಿಗೆ ಗಾಯ

ಕಿಡಿಗೇಡಿಗಳಿಂದ ಬಿಜೆಪಿ ಶಾಸಕ ಅನಿಲ್ ಬೆನಕೆ ಕಚೇರಿ ಮೇಲೆ ಕಲ್ಲೆಸೆತ

ಇತ್ತೀಚಿನ ಸುದ್ದಿ

Exit mobile version