ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಣೆ
ಕಲಬುರಗಿ: ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ನಗರದ ಎರಡು ಸರ್ಕಾರಿ ಪಿಯು ಕಾಲೇಜಿನಲ್ಲಿ ಅವಕಾಶ ನಿರಾಕರಿಸಲಾಗಿದ್ದು, ಹೀಗಾಗಿ ವಿದ್ಯಾರ್ಥಿನಿಯರು ವಾಪಸ್ ಮನೆಗೆ ಮರಳುವಂತಾಯಿತು.
ಜೇವರ್ಗಿ ಕಾಲೋನಿಯಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಹಳೆಯ ಎಸ್ ಪಿ ಕಚೇರಿ ಬಳಿಯ ಸರ್ಕಾರಿ ಕನ್ಯಾ ಪ್ರೌಢಶಾಲೆ ಹಾಗೂ ಪಿಯು ಕಾಲೇಜಿಗೆ ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.
ಇನ್ನೂ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯವಾಗಿದೆ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಲಾಗಿದ್ದು, ನಾಳೆಯಿಂದ ಸಮವಸ್ತ್ರ ಧರಿಸಿ ಬರುವುದಾಗಿ ವಿದ್ಯಾರ್ಥಿನಿಯರು ತಿಳಿಸಿ ವಾಪಸ್ ಆಗಿದ್ದಾರೆ ಎಂದು ಪ್ರಾಚಾರ್ಯರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮುಧೋಳ ಫೈಲ್ಸ್ !: ಜೋಡಿ ಕೊಲೆ ಪ್ರಕರಣ ಮಾಸುವ ಮೊದಲೇ ದಲಿತ ಯುವಕನ ಮೇಲೆ ಮಾರಣಾಂತಿ ಹಲ್ಲೆ!
ಚಿನ್ನ ಖರೀದಿಗೆ ಮುಗಿಬಿದ್ದ ಜನ: ಮತ್ತಷ್ಟು ಇಳಿಕೆಯಾಯ್ತು ಗೋಲ್ಡ್, ಸಿಲ್ವರ್ ರೇಟ್
ಕನ್ನಡ ಚಿತ್ರರಂಗ ನಟ, ನಿರ್ದೇಶಕ, ನಿರ್ಮಾಪಕ ಎಸ್.ನಾರಾಯಣ್ ರಾಜಕೀಯಕ್ಕೆ ಎಂಟ್ರಿ
ಸ್ನೇಹಿತನ ತಂಗಿ ಜತೆ ಫೋನ್ ನಲ್ಲಿ ಮಾತನಾಡುತ್ತಿದ್ದ ಯುವಕನ ದುರಂತ ಅಂತ್ಯ!