ಹಿಜಾಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿದ ಪ್ರಿನ್ಸಿಪಾಲ್ - Mahanayaka
8:01 AM Thursday 12 - December 2024

ಹಿಜಾಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರ ಹಾಕಿದ ಪ್ರಿನ್ಸಿಪಾಲ್

hijab
31/12/2021

ಉಡುಪಿ: ಹಿಜಾಬ್ ಧರಿಸಿದ್ದಾರೆ ಎಂದು 6 ಮುಸ್ಲಿಮ್ ವಿದ್ಯಾರ್ಥಿನಿಯರನ್ನು ತರಗತಿಯಿಂದ ಹೊರಗೆ ಹಾಕಿರುವ ಘಟನೆ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.

3 ದಿನಗಳಿಂದ ಕಾಲೇಜಿಗೆ ಬರುತ್ತಿದ್ದೇವೆ‌ ಆದರೆ ನಮ್ಮನ್ನು ತರಗತಿಗೂ ಬಿಡುತ್ತಿಲ್ಲ. ಹಾಜರಾತಿಯೂ ನೀಡುತ್ತಿಲ್ಲ. 3 ದಿನಗಳಿಂದ ಹೊರಗೆ ಇದ್ದೇವೆ. ಈ ಬಗ್ಗೆ ಪೋಷಕರನ್ನು ಕರೆತನ್ನಿ ಎನ್ನುತ್ತಾರೆ.  ಪೋಷಕರು ಬಂದರೆ ಅವರ ಬಳಿಯೂ ಮಾತನಾಡದೆ ಕೆಲಸದ ನೆಪ ಹೇಳಿ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ದೂರಿದ್ದಾರೆ.

ಕಾಲೇಜಿನಲ್ಲಿ ತುಂಬಾ ತಾರತಮ್ಯ ಮಾಡುತ್ತಿದ್ದಾರೆ. ಕಳೆದ ಮೂರು ದಿನದಿಂದ ನಮಗೆ ಹಾಜರಿ ಕೂಡಾ ನೀಡುತ್ತಿಲ್ಲ. ಅಲ್ಲದೆ ಹಿಜಾಬ್ ಹಾಕಿದ್ದೇವೆ ಎಂಬ ಕಾರಣಕ್ಕೆ ಶಿಕ್ಷಕರು ನಮ್ಮೊಂದಿಗೆ ಸರಿಯಾಗಿ ಸ್ಪಂದಿಸುವುದಿಲ್ಲ ಎಂದು ವಿದ್ಯಾರ್ಥಿನಿಯರು ಹೇಳಿದ್ದಾರೆ.

ಶಿಕ್ಷಕ ಪ್ರಕಾಶ್ ವಿದ್ಯಾರ್ಥಿಗಳನ್ನು ಕರೆದು ಕಾಲೇಜು ಆವರಣದಲ್ಲಿ ಉರ್ದು, ಬ್ಯಾರಿ ಭಾಷೆ ಮಾತನಾಡುವಂತಿಲ್ಲ, ಸಲಾಮ್ ಮಾಡುವಂತಿಲ್ಲ ಹಾಗೂ ಯಾವುದೇ ಮುಸ್ಲಿಂ ಧರ್ಮದ ಆಚರಣೆ ಮಾಡುವಂತಿಲ್ಲ ಎಂದು ಹೇಳಿರುವುದಾಗಿ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇನ್ನೂ ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಪ್ರಾಂಶುಪಾಲ ರುದ್ರೆಗೌಡ, ನಮ್ಮಲ್ಲಿ ಈವರೆಗೆ ಹಿಜಾಬ್ ಹಾಕಿಕೊಂಡು ತರಗತಿಗೆ ಹಾಜರಾಗುವ ನಿಯಮ ಇರಲಿಲ್ಲ. ಕಳೆದ ಮೂರು ದಿನಗಳಿಂದ ಸುಮಾರು 60 ಮಂದಿ ವಿದ್ಯಾರ್ಥಿಗಳಲ್ಲಿ ಕೆಲವು ಮಂದಿ ಮಾತ್ರ ಹಿಜಾಬ್ ಹಾಕಿಕೊಂಡು ಬರುತ್ತಿದ್ದಾರೆ. ಅವರ ಮನೆಯವರನ್ನು ಕರೆದು ಮಾತುಕತೆ ಮಾಡಿದ್ದೇವೆ ಅವರೆಲ್ಲರೂ ಅರ್ಥ ಮಾಡಿಕೊಂಡು ಒಪ್ಪಿದ್ದಾರೆ ಎಂದು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪುನೀತ್ ರಾಜ್ ಕುಮಾರ್ ಗೆ ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸಿದ ಕೆಎಂಎಫ್

ಹೊಸ ವರ್ಷಾಚರಣೆಗೆ ಬಜರಂಗದಳ ವಿರೋಧ

ಕ್ರಿಸ್ಮಸ್ ಆಚರಣೆಗೆ ಅಡ್ಡಿ:  ಬಜರಂಗದಳ ಕಾರ್ಯಕರ್ತರನ್ನು ತರಾಟೆಗೆತ್ತಿಕೊಂಡ ಮಹಿಳೆಯರು | ವಿಡಿಯೋ ವೈರಲ್

ಅಂಬೇಡ್ಕರ್, ಕುವೆಂಪು ವೃತ್ತ ವಿವಾದ: ಮೈಸೂರಿನ ಮಾತೃ ಮಂಡಳಿ ವೃತ್ತ ನೆಲಸಮ

ಕಾಂಗ್ರೆಸ್ ಗೆ ಮದುವೆಯಾಗಿ 25 ವರ್ಷದ ಬಳಿಕ ಗಂಡು ಮಗು ಹುಟ್ಟಿದ ಸಂಭ್ರಮ | ಈಶ್ವರಪ್ಪ

ಇತ್ತೀಚಿನ ಸುದ್ದಿ