ಹಿಜಾಬ್ ನಿಷೇಧ ಪ್ರಕರಣ: ತುರ್ತು ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಕಾರ - Mahanayaka
3:06 AM Wednesday 11 - December 2024

ಹಿಜಾಬ್ ನಿಷೇಧ ಪ್ರಕರಣ: ತುರ್ತು ಮನವಿ ಆಲಿಸಲು ಸುಪ್ರೀಂ ಕೋರ್ಟ್ ನಕಾರ

suprim court
24/03/2022

ನವದೆಹಲಿ: ತರಗತಿಗಳಲ್ಲಿ ಹಿಜಬ್ ನಿಷೇಧ ಪ್ರಕರಣಕ್ಕೆ ಸಂಬಂಧಿಸಂತೆ ಸುಪ್ರೀಂಕೋರ್ಟ್ 2ನೇ ಬಾರಿಯೂ ತುರ್ತು ವಿಚಾರಣೆ ನಡೆಸುವುದಿಲ್ಲ ಎಂದು ಹೇಳಿದೆ.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ನಿಷೇಧವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸಿಜೆಐ ಎನ್‌.ವಿ.ರಮಣ ಅವರ ಮುಂದೆ ಹಿರಿಯ ವಕೀಲ ದೇವದತ್ತ್ ಕಾಮತ್ ಪ್ರಸ್ತಾಪಿಸಿದರು. ಆದರೆ ಸಿಜೆಐ ಅವರು ಅರ್ಜಿದಾರರಿಗೆ ಈ ವಿಷಯವನ್ನು ಸಂವೇದನಾಶೀಲಗೊಳಿಸದಂತೆ ಕೋರಿ ವಿಷಯದ ವಿಚಾರಣೆಗೆ ಯಾವುದೇ ನಿರ್ದಿಷ್ಟ ದಿನಾಂಕವನ್ನು ನೀಡಲು ನಿರಾಕರಿಸಿದರು.

ಶಾಲೆಯಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ಪಾಲಿಸಬೇಕೆಂಬ ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಅಷ್ಟೇ ಅಲ್ಲದೇ ಹಿಜಬ್ ಮುಸ್ಲಿಂ ಧರ್ಮದ ಕಡ್ಡಾಯ ಆಚರಣೆ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿತ್ತು. ಈ ತೀರ್ಪನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಕೆಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು
ಬೈಕ್‌ಗೆ ಬಸ್ ಡಿಕ್ಕಿ: ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರ ದಾರುಣ ಸಾವು

ಅಪ್ರಾಪ್ತ ಬಾಲಕಿಯ ಅತ್ಯಾಚಾರ: ಅಪರಾಧಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಆರೋಪಿಯನ್ನು ಬಂಧಿಸಲು ತೆರಳಿದ್ದ ಎಸ್‍ಐಗೆ ಚೂರಿ ಇರಿತ

ಕೊಲ್ಲೂರು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರುವಂತೆ ಹಿಂದೂ ಸಂಘಟನೆಗಳಿಂದ ಮನವಿ

ಇತ್ತೀಚಿನ ಸುದ್ದಿ