ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ನಲ್ಲೇ ತಡೆದ ಪ್ರಾಂಶುಪಾಲರು
ಉಡುಪಿ: ಹಿಜಬ್ ಧರಿಸಿ ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಕುಂದಾಪುರದ ಸರ್ಕಾರಿ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಗೇಟ್ ಬಳಿ ತಡೆದಿರುವ ಬಗ್ಗೆ ವರದಿಯಾಗಿದೆ.
ಕಾಲೇಜಿಗೆ ಬಂದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ತಡೆದು ಹಿಜಬ್ ತೆಗೆದು ತರಗತಿಗೆ ಬರುವಂತೆ ತಿಳಿಸಿದರು. ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ನಿರಾಕರಿಸಿದರು. ಈ ಸಂದರ್ಭದಲ್ಲಿ ಗೇಟ್ ಬಳಿ ಪ್ರಾಂಶುಪಾಲರ ಜೊತೆ ವಿದ್ಯಾರ್ಥಿನಿಯರ ವಾಗ್ವಾದ ನಡೆಯಿತು.
ನಾವು ಮೊದಲಿನಿಂದಲೂ ಹಿಜಬ್ ಧರಿಸಿ ತರಗತಿಗೆ ಹಾಜರಾಗುತ್ತಿದ್ದೇವೆ. ಬೇಕಾದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬರಲಿ. ಸರ್ಕಾರದ ಆದೇಶದಲ್ಲಿ ಕುಂದಾಪುರ ಕಾಲೇಜು ಉಲ್ಲೇಖವಿಲ್ಲ. ಕುಂದಾಪುರ ಸರ್ಕಾರಿ ಕಾಲೇಜಿನ ಉಲ್ಲೇಖವಿದ್ದರೆ ಮಾತ್ರ ನಾವು ಹಿಜಬ್ ತೆಗೆಯುತ್ತೇವೆ ಎಂದು ವಿದ್ಯಾರ್ಥಿನಿಯರು ವಾದಿಸಿದ್ದಾರೆ.
ಇದಕ್ಕೆ ಉತ್ತರಿಸಿದ ಪ್ರಾಂಶುಪಾಲರು ಸರ್ಕಾರ ಇಡೀ ರಾಜ್ಯಕ್ಕೆ ಸುತ್ತೋಲೆ ಹೊರಡಿಸಿದೆ. ರಾಜ್ಯದಲ್ಲಿ 1200ಕ್ಕೂ ಅಧಿಕ ಕಾಲೇಜಿದೆ. ಪ್ರತಿಯೊಂದು ಕಾಲೇಜಿಗೂ ನೋಟಿಸ್ ನೀಡಲು ಆಗುವುದಿಲ್ಲ. ಸರ್ಕಾರ ಏನು ಹೇಳುತ್ತದೋ ಅದನ್ನು ನಾವು ಅನುಸರಿಸುತ್ತೇವೆ ಎಂದು ತಿಳಿಸಿದರು.
ನೂರಾರು ಹಿಂದೂ ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲುಗಳನ್ನು ತೊಟ್ಟು ಕಾಲೇಜು ಕ್ಯಾಂಪಸ್ ಪ್ರವೇಶಿಸಿದ್ದರು. ಆದರೆ ಇಂದು ಕೇಸರಿ ಶಾಲು ತೊಡದೇ ಕಾಲೇಜಿಗೆ ಹಿಂದೂ ವಿದ್ಯಾರ್ಥಿಗಳು ಬಂದಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಉಡುಪಿ ಉಸ್ತುವಾರಿ ಸಚಿವ ಎಸ್. ಅಂಗಾರ, ಒಂದೊಂದು ಕಾಲೇಜಿಗೆ ಒಂದೊಂದು ನಿಯಮ ಅಸಾಧ್ಯವಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಜೊತೆ ಚರ್ಚಿಸಿ ಸರ್ಕಾರ ಒಂದು ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ. ಈ ರೀತಿಯ ಗೊಂದಲ ಸೃಷ್ಟಿ ಮಾಡುವುದು ಸರಿಯಲ್ಲ ಎಂದು ಹೇಳಿದರು.
ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ. ಯಾರು ಕೂಡ ತಮಗೆ ಬೇಕಾದಂತೆ ಕಾಲೇಜಿಗೆ ಬರಲು ಅವಕಾಶವಿಲ್ಲ. ತಜ್ಞರ ಸಮಿತಿಯನ್ನು ಸರ್ಕಾರ ರಚಿಸಿದೆ. ಜಿಲ್ಲಾಡಳಿತದ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Bk3PAoJFRvJLUSBPd39m1C
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಹುಲ್ಲು ತರಲು ಹೋಗಿದ್ದ ವೇಳೆ ಕಾಡಾನೆ ದಾಳಿ: ವ್ಯಕ್ತಿಯ ದಾರುಣ ಸಾವು
ಹಾವನ್ನು ರಕ್ಷಿಸಲು ಹೋಗಿ ನಾಲೆಗೆ ಬಿದ್ದ ಕಾರು: ಮಹಿಳೆಯ ದಾರುಣ ಸಾವು
ಪುನೀತ್ ರಾಜ್ ಕುಮಾರ್ ಮನೆಗೆ ಭೇಟಿ ನೀಡಲಿರುವ ಅಲ್ಲು ಅರ್ಜುನ್: ಅಂದೇಕೆ ಭೇಟಿ ನೀಡಿರಲಿಲ್ಲ ಗೊತ್ತಾ?
3 ವರ್ಷದ ಮಗುವನ್ನು ಕರಡಿ ಬೋನಿಗೆ ಎಸೆದ ತಾಯಿ: ಸಿಸಿ ಕ್ಯಾಮರದಲ್ಲಿ ಭಯಾನಕ ದೃಶ್ಯ ಸೆರೆ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮಾದರಿ ಪ್ರಶ್ನೆ ಪತ್ರಿಕೆ ಪ್ರಕಟ