ವಯನಾಡ್ ನಲ್ಲಿ ಗುಡ್ಡ ಕುಸಿತ: ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗ್ತಿದೆ!
ವಯನಾಡ್: ಕೇರಳದಲ್ಲಿ ನಡೆದ ಭೀಕರ ಪರ್ವತ ಸ್ಫೋಟದಲ್ಲಿ ಸಾವಿಗೀಡಾದವರ ಸಂಖ್ಯೆ 44ಕ್ಕೆ ಏರಿಕೆಯಾಗಿದ್ದು, ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಈಗಾಗಲೇ ಮಣ್ಣಿನಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಕೂಡ ಭರದಿಂದ ಸಾಗುತ್ತಿದೆ. ಎನ್.ಡಿ.ಆರ್.ಎಫ್ ನೇತೃತ್ವದಲ್ಲಿ ಕಾರ್ಯಾಚರಣರ ನಡೆಯುತ್ತಿದೆ.
ಮುಂಡಕ್ಕೈ, ಚೂರಲ್ಮಲದಲ್ಲಿ ಇಡೀ ಗ್ರಾಮವೇ ಗುಡ್ಡ ಕುಸಿದು ನೆಲಸಮವಾಗಿದೆ. ಕುಸಿತಗೊಂಡ ಮನೆಯಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು, ಇವರ ರಕ್ಷಣೆಗೆ ಮೊದಲು ಕಾರ್ಯಾಚರಣೆ ಆರಂಭಗೊಂಡಿದೆ. ಚಾಲಿಯಾರ್ ತೀರವೊಂದರಲ್ಲೇ 11ಮೃತದೇಹ ಲಭಿಸಿದೆ. ಈ ಪ್ರದೇಶದ 7 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲಾ ಹಾಗೂ ನೂಲ್ಪುಝಾ ಒಟ್ಟು ನಾಲ್ಕು ಗ್ರಾಮದಲ್ಲಿ ಭೂಕುಸಿತ ಆಗಿದೆ. ಮುಂಡಕೈ ಮದರಸಾ ಬಳಿ 150 ಮಂದಿ ಸಿಲುಕಿಕೊಂಡಿದ್ದಾರೆ. ಮುಂಡಕೈ ಮದರಸಾ ಬಳಿ ಸುಮಾರು 50 ಮನೆಗಳು ಮಣ್ಣಿನಡಿ ಸಿಕ್ಕಿಹಾಕಿಕೊಂಡಿದೆ. ಇದೂವರೆಗೂ ಅಲ್ಲಿಂದ ಕೇವಲ 3 ಜನರನ್ನು ಮಾತ್ರ ರಕ್ಷಿಸಲು ಸಾಧ್ಯವಾಗಿದೆ. ಸಾವಿನ ಸಂಖ್ಯೆ ಕ್ಷಣ ಕ್ಷಣಕ್ಕೂ ಏರಿಕೆಯಾಗುತ್ತಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97