ಬಾಲಕಿ ಆತ್ಮಹತ್ಯೆ ಪ್ರಕರಣ: ಹಿಂದೂ ಸಂಘಟನೆ ಮುಖಂಡ ನಿತೇಶ್ ಬಂಧನ

nitesh
17/01/2023

ಚಿಕ್ಕಮಗಳೂರು: ಪ್ರೇಮ ವೈಫಲ್ಯದಿಂದ ಮನನೊಂದು ಬಾಲಕಿ ಆತ್ಮಹತ್ಯೆ ಪ್ರಕರಣ ಸಂಬಂಧ  ಆರೋಪಿ, ಹಿಂದೂ ಸಂಘಟನೆ ಮುಖಂಡ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಆರೋಪಿ ನಿತೇಶ್ ನನ್ನು ಕುದುರೆಮುಖ ಪೊಲೀಸರು ಬಂಧಿಸಿದ್ದಾರೆ. ಸಾವಿಗೂ ಮೊದಲು ಬಾಲಕಿ ಡೆತ್ ನೋಟ್ ಬರೆದಿದ್ದು, ಈ ಆಧಾರದಲ್ಲಿ ಆರೋಪಿ ಹಿತೇಶ್ ನನ್ನು ಬಂಧಿಸಲಾಗಿದೆ.

ಹಿತೇಶ್ ಪ್ರೀತಿಸಿ ವಂಚಿಸಿರುವ ಹಿನ್ನೆಲೆಯಲ್ಲಿ ಮನನೊಂದ ಬಾಲಕಿ ಜನವರಿ 10ರಂದು ವಿಷ ಸೇವಿಸಿದ್ದಳು. ಸಾವಿಗೂ ಮುನ್ನ ಆಸ್ಪತ್ರೆಯಲ್ಲೇ ಡೆತ್ ನೋಟ್ ಬರೆದಿದ್ದಳು. 4 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿ ಸಾವಿಗೀಡಾಗಿದ್ದಳು.

ಇತ್ತ ನಿತೇಶ್ ತನ್ನ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆಮರೆಸಿಕೊಂಡಿದ್ದ. ಇದೀಗ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

YouTube video player

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ

Exit mobile version