ಪ್ರೀತಿಸಿ ವಿವಾಹವಾದ ಹಿಂದೂ—ಮುಸ್ಲಿಮ್ ಜೋಡಿ!

ಚಿಕ್ಕಬಳ್ಳಾಪುರ: ಹಿಂದೂ ಯುವಕ ಹಾಗೂ ಮುಸ್ಲಿಮ್ ಯುವತಿ ಪರಸ್ಪರ ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮೈಲಪ್ಪನಹಳ್ಳಿಯಲ್ಲಿ ನಡೆದಿದೆ.
ಫಸೀಹಾ(23) ಹಾಗೂ ಎದುರು ಮನೆಯ ಯುವಕ ನಾಗಾರ್ಜುನ(24) ಪರಸ್ಪರ ಪ್ರೀತಿಸಿ ವಿವಾಹವಾಗಿದ್ದಾರೆ. ಈ ಜೋಡಿ ತಮ್ಮ ಜಾತಿ ಧರ್ಮವನ್ನು ಬದಿಗಿಟ್ಟು ಪೋಷಕರ ವಿರೋಧದ ನಡುವೆಯೂ ಪೊಲೀಸ್ ಠಾಣೆಯಲ್ಲಿ ಒಂದಾಗಿದ್ದಾರೆ.
ಈ ಜೋಡಿ ಕಳೆದ 2ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದ್ರೆ ಇವರಿಬ್ಬರ ಪ್ರೀತಿಗೆ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ನಾವಿಬ್ಬರು ಜೊತೆಯಾಗಿ ಬದುಕುತ್ತೇವೆ ಎಂದು ಜೋಡಿ ತೀರ್ಮಾನಿಸಿ, ಮನೆ ಬಿಟ್ಟು ಬಂದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಮೊರೆ ಹೋಗಿದ್ದರು.
ವಿಷಯ ತಿಳಿದು ಇಬ್ಬರ ಪೋಷಕರೂ ಪೊಲೀಸ್ ಠಾಣೆಗೆ ಆಗಮಿಸಿ ವಿರೋಧ ವ್ಯಕ್ತಪಡಿಸಿದರು. ಆದರೆ ಕೊನೆಗೂ ಪೋಷಕರ ವಿರೋಧದ ನಡುವೆಯೂ ಜೋಡಿ ದೇವಸ್ಥಾನವೊಂದರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನೂ ಮದುವೆಗೆ ಯುವತಿಯ ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಸೂಕ್ತ ರಕ್ಷಣೆ ಕೋರಿ ಜೋಡಿ ಪೊಲೀಸರಿಗೆ ಮನವಿ ಮಾಡಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/HEkqDgrW2BlJLad5kZ1DX7