ಬಾಂಗ್ಲಾದಲ್ಲಿ ಹಿಂದೂಗಳಿಗೆ ದೌರ್ಜನ್ಯ ಆರೋಪ: ಹಿಂದೂ ಸಂಘಟನೆಗಳ ಪ್ರತಿಭಟನೆ; ನಿಷೇಧಾಜ್ಞೆ
ಬಾಂಗ್ಲಾದೇಶದಲ್ಲಿ ಹಿಂದೂಗಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಆದ್ದರಿಂದ ಬಾಂಗ್ಲಾದೇಶದ ಜೊತೆಗಿನ ಟಿ20 ಪಂದ್ಯಾವಳಿಯನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿ ಗ್ವಾಲಿಯರ್ ನಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ಪ್ರತಿಭಟನೆಯ ಕಾರಣಕ್ಕಾಗಿ ಜಿಲ್ಲಾಧಿಕಾರಿಯವರು ಗ್ವಾಲಿಯರ್ ನಲ್ಲಿ ನಿಷೇಧಾಜ್ಞೆ ಹೊರಡಿಸಿದ್ದಾರೆ.
ಗ್ವಾಲಿಯರ್ ನಲ್ಲಿ ಜನರು ಗುಂಪುಗೂಡುವ ಮತ್ತು ಪ್ರತಿಭಟನೆ ಮಾಡುವುದನ್ನು ನಿಷೇಧಿಸಲಾಗಿದೆ. ನಾಲ್ಕು ಮಂದಿಗಿಂತ ಅಧಿಕ ಜನರು ಒಂದೆಡೆ ಸೇರುವಂತಿಲ್ಲ, ಸೋಶಿಯಲ್ ಮೀಡಿಯಾದ ಮೇಲೆ ನಿಗಾ ಇಡಲಾಗಿದೆ, ಯಾರಾದರೂ ಪ್ರಚೋದನಕಾರಿ ಸಂದೇಶವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ತಿಳಿಸಿದೆ.
14 ವರ್ಷಗಳ ಬಳಿಕ ಇದೇ ಮೊದಲ ಬಾರಿ ಗ್ವಾಲಿಯರ್ ನ ಮಾಧವ ರಾವ್ ಸಿಂಧ್ಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯವನ್ನು ಏರ್ಪಡಿಸಲಾಗುತ್ತಿದೆ. ಸುರಕ್ಷತೆಯನ್ನು ಖಾತರಿ ಪಡಿಸುವುದಕ್ಕಾಗಿ 1600ಕ್ಕಿಂತಲೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth