ಹಿಂದೂ ಪದ್ಧತಿಯ ಆಚರಣೆಗಳೆಂದರೆ ಕಾಂಗ್ರೆಸ್ ಗೆ ಅಲರ್ಜಿ | ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ - Mahanayaka
10:31 AM Thursday 12 - December 2024

ಹಿಂದೂ ಪದ್ಧತಿಯ ಆಚರಣೆಗಳೆಂದರೆ ಕಾಂಗ್ರೆಸ್ ಗೆ ಅಲರ್ಜಿ | ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

pralhad joshi
24/10/2021

ಹಾವೇರಿ: ಜನರಿಗೆ ಆತ್ಮಸ್ಥೈರ್ಯ ತುಂಬಲು ಕೊವಿಡ್ ಸಂಕಷ್ಟದ ಸಂದರ್ಭದಲ್ಲಿ ದೀಪ ಬೆಳಗಿಸಿ, ಗಂಟೆ ಮತ್ತು ಜಾಗಟೆ ಬಾರಿಸಿ ಎಂದು ಪ್ರಧಾನಿ ಕರೆ ನೀಡಿದ್ದರು. ಆದರೆ ಕಾಂಗ್ರೆಸ್(Congress) ಇದನ್ನು ಲೇವಡಿ ಮಾಡಿತ್ತು. ಹಿಂದೂ ಪದ್ಧತಿಯ ಆಚರಣೆಗಳೆಂದರೆ ಕಾಂಗ್ರೆಸ್ ಗೆ ಅಲರ್ಜಿ ಎಂದು ಸಚಿವ ಪ್ರಲ್ಹಾದ್ ಜೋಶಿ(pPalhad Joshi) ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಾನಗಲ್ ನಲ್ಲಿ ಮಾತನಾಡಿದ ಅವರು, ಜಗತ್ತಿನಲ್ಲಿ 700 ಲಸಿಕೆ (Covid Vaccine) ಹಾಕಲಾಗಿದೆ. ಭಾರತದಲ್ಲಿ 100 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ಆದರೆ ಸಿದ್ದರಾಮಯ್ಯನವರು ಇದನ್ನೂ ಟೀಕಿಸುತ್ತಾರೆ. ಅವರನ್ನು ವಿರೋಧಿಸುವ ಭರದಲ್ಲಿ ದೇಶದ ಸಾಧನೆಯನ್ನೇಕೆ ವಿರೋಧಿಸುತ್ತೀರಿ?. ದೇಶವನ್ನೇ ವಿರೋಧಿಸಲು ಹೇಸದ ಜನ ಇವರು ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಕಾಂಗ್ರೆಸ್‌ ನಾಯಕರು ದೊಡ್ಡದಾಗಿ ಮಾತನಾಡುತ್ತಾರೆ. ಎರಡೂವರೆ ವರ್ಷಗಳಿಂದ ಎಐಸಿಸಿಗೆ ಅಧ್ಯಕ್ಷರೇ ಇಲ್ಲ. ಸಮರ್ಥ ಅಧ್ಯಕ್ಷರೊಬ್ಬರನ್ನು ನೇಮಿಸಿ ಎಂದು ಹೇಳಿದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಗುಲಾಂ ನಬಿ ಆಜಾದ್‌ (Ghulam Nabi Azad) ಅವರನ್ನು ಹೊರಹಾಕಿದರು ಎಂದು ಅವರು ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಅಮೃತ ಭಾರತಿ ವಿದ್ಯಾಲಯ ಹೆಬ್ರಿಯ ಕನ್ನಡ ಶಿಕ್ಷಕ  ಮಹೇಶ ಹೈಕಾಡಿ ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ

ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ಸಿ.ಎನ್.ನಾಗೇಶ್ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಕೆ

ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಕುಮಾರಸ್ವಾಮಿಯ ಗುರಿ: ಜಮೀರ್ ಆರೋಪ

ಫೋಟೋ ಹಾಕಿಲ್ಲ ಅಂತ, ಸಿದ್ದರಾಮಯ್ಯ ಕಾರ್ಯಕ್ರಮಕ್ಕೇ ಬಂದಿಲ್ಲ, ಇನ್ನು ಸಿಎಂ ಸ್ಥಾನ ಬಿಡ್ತಾರಾ? | ಕುಮಾರಸ್ವಾಮಿ ಪ್ರಶ್ನೆ

ತೈಲ ಬೆಲೆ ಏರಿಕೆಯ ಬಳಿಕ ಮತ್ತೊಂದು ಶಾಕ್: ಬೆಂಕಿ ಪೊಟ್ಟಣದ ಬೆಲೆಯೂ ಏರಿಕೆ!

ರಾಜ್ಯ ಖಾಸಗಿ ಶಿಕ್ಷಕರ ಬಳಗದ ಸಂಸ್ಥಾಪಕ ಸಿ.ಎನ್.ನಾಗೇಶ್ ಅವರಿಗೆ ಹುಟ್ಟುಹಬ್ಬದ ಶುಭ ಹಾರೈಕೆ

ಇತ್ತೀಚಿನ ಸುದ್ದಿ