ಕೆನಡಾದಲ್ಲಿ ಹಿಂದೂ ದೇವಾಲಯ ಧ್ವಂಸ: ಗೀಚು ಬರಹದಿಂದ ವಿರೂಪ
ಕೆನಡಾದ ಎಡ್ಮಂಟನ್ ನಲ್ಲಿ ಹಿಂದೂ ದೇವಾಲಯವನ್ನು ಧ್ವಂಸಗೊಳಿಸಲಾಗಿದೆ. ಅಲ್ಲದೇ ಗೋಡೆಗಳ ಮೇಲೆ ಗೀಚುಬರಹವನ್ನು ಬರೆಯಲಾಗಿದೆ. ಈ ಘಟನೆಯ ನಂತರ, ಕೆನಡಾದ ವಿಶ್ವ ಹಿಂದೂ ಪರಿಷತ್ ಇದನ್ನು ಖಂಡಿಸಿದ್ದು ಬೆಳೆಯುತ್ತಿರುವ ಉಗ್ರಗಾಮಿ ಸಿದ್ಧಾಂತದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆನಡಾ ಸರ್ಕಾರಕ್ಕೆ ಮನವಿ ಮಾಡಿದೆ.
ಎಡ್ಮಂಟನ್ ನ ಬಿಎಪಿಎಸ್ ಮಂದಿರದಲ್ಲಿ ಹಿಂದೂಫೋಬಿಕ್ ಗೀಚುಬರಹ ಮತ್ತು ವಿಧ್ವಂಸಕ ಕೃತ್ಯವನ್ನು ವಿಎಚ್ ಪಿ ಕೆನಡಾ ಬಲವಾಗಿ ಖಂಡಿಸುತ್ತದೆ” ಎಂದು ಸಂಸ್ಥೆ ಎಕ್ಸ್ ಪೋಸ್ಟ್ ನಲ್ಲಿ ಬರೆದಿದೆ.
ನಮ್ಮ ದೇಶದಲ್ಲಿ ಶಾಂತಿಪ್ರಿಯ ಹಿಂದೂ ಸಮುದಾಯದ ವಿರುದ್ಧ ದ್ವೇಷವನ್ನು ಪ್ರಚೋದಿಸುವ ಹೆಚ್ಚುತ್ತಿರುವ ಉಗ್ರಗಾಮಿ ಸಿದ್ಧಾಂತದ ವಿರುದ್ಧ ನಿರ್ಣಾಯಕವಾಗಿ ಕಾರ್ಯನಿರ್ವಹಿಸುವಂತೆ ನಾವು ಕೆನಡಾದ ಸರ್ಕಾರದ ಎಲ್ಲಾ ಹಂತಗಳನ್ನು ಒತ್ತಾಯಿಸುತ್ತೇವೆ ಎಂದು ಅದು ಹೇಳಿದೆ.
ಇತ್ತೀಚಿನ ದಿನಗಳಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಗಳು ದೇವಾಲಯವನ್ನು ಇಂತಹ ಗೀಚುಬರಹದಿಂದ ವಿರೂಪಗೊಳಿಸುತ್ತಿರುವುದು ಇದೇ ಮೊದಲಲ್ಲ.
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ನಂತರ ಖಲಿಸ್ತಾನ್ ಬೆಂಬಲಿಗರು ಭಾರತ ವಿರೋಧಿ ಚಟುವಟಿಕೆಗಳನ್ನು ಹೆಚ್ಚಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth