ಹೊಳೆಗೆ ಕಾರು ಬಿದ್ದ ಪ್ರಕರಣ: ಓರ್ವನ ಮೃತದೇಹ ಪತ್ತೆ - Mahanayaka

ಹೊಳೆಗೆ ಕಾರು ಬಿದ್ದ ಪ್ರಕರಣ: ಓರ್ವನ ಮೃತದೇಹ ಪತ್ತೆ

baithadka
12/07/2022

ಕಾಣಿಯೂರು:  ದಕ್ಷಿಣ ಕನ್ನಡ ಜಿಲ್ಲೆಯ ಕಾಣಿಯೂರು ಬೈತ್ತಡ್ಕ ಹೊಳೆಗೆ ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈತಡ್ಕದಿಂದ 200 ಮೀಟರ್ ದೂರದ ಮರಕ್ಕಡ ಹೊಳೆಯಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ.

ಮೃತಪಟ್ಟ ವ್ಯಕ್ತಿ ಯಾರು ಎನ್ನುವುದನ್ನು ಇನ್ನೂ ಗುರುತಿಸಲು ಸಾಧ್ಯವಾಗಿಲ್ಲ.  ಹೊಳೆಯ ಬದಿಯ ಮರದ ದಿಮ್ಮಿಯಲ್ಲಿ ಮೃತದೇಹ ಸಿಕ್ಕಿ ಹಾಕಿಕೊಂಡಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ವೇಳೆ ಮೃತದೇಹ ಪತ್ತೆಯಾಗಿದೆ.

ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಜುಲೈ 9ರಂದು ರಾತ್ರಿ ಈ ಘಟನೆ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಧನುಷ್ ಹಾಗೂ ಕನ್ಯಾನ ನಿವಾಸಿ ಧನುಷ್ ಕಾರಿನಲ್ಲಿದ್ದವರು ಎಂದು ಹೇಳಲಾಗಿದೆ. ಕಾರಿನಲ್ಲಿದ್ದವರ ಪೈಕಿ ಯಾರ ಮೃತದೇಹ ಪತ್ತೆಯಾಗಿರೋದು ಎನ್ನುವುದು ಇನ್ನು ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ